(ನ್ಯೂಸ್ ಕಡಬ) newskadaba.com ಡಿ. 16 ಬೆಂಗಳೂರು: ನಟ ದರ್ಶನ್ ಜಾಮೀನು ಸಿಗುತ್ತಿದ್ದಂತೆ ಸಂಪೂರ್ಣವಾಗಿ ಗುಣಮುಖರಾದಂತೆ ಕಾಣಿಸುತ್ತಿದೆ. ಅವರು ವೈದ್ಯರ ಸಲಹೆ ಪಡೆದು ಆಸ್ಪತ್ರೆಯಿಂದ ಹೊರ ಬಂದಿದ್ದಾರೆ. ಬೆನ್ನು ನೋವಿನ ಕಾರಣ ನಿಡಿ ಮಧ್ಯಂತರ ಜಾಮೀನು ಪಡೆದಿದ್ದರು. ಕಳೆದ ಒಂದೂವರೆ ತಿಂಗಳಿಂದ ಅವರು ಆಸ್ಪತ್ರೆಯಲ್ಲಿಯೇ ಇದ್ದರು.
ದರ್ಶನ್ಗೆ ಶಸ್ತ್ರಚಿಕಿತ್ಸೆ ಮಾಡಿಸದೇ ಇದ್ದರೆ ಪಾರ್ಶ್ವವಾಯು ಆಗುತ್ತದೆ ಎಂಬುವುದಾಗಿ ವೈದ್ಯರು ವರದಿ ನೀಡಿದ್ದರು. ಇದೇ ವರದಿ ನೀಡಿ ದರ್ಶನ್ ಅವರು ಮಧ್ಯಂತರ ಜಾಮೀನು ಪಡೆದು ಆಸ್ಪತ್ರೆ ಸೇರಿದ್ದರು. ಒಂದೂವರೆ ತಿಂಗಳು ಕಳೆದರೂ ದರ್ಶನ್ ಯಾವುದೇ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿಲ್ಲ. ‘ಬಿಪಿ ಕಾರಣಕ್ಕೆ ಶಸ್ತ್ರಚಿಕಿತ್ಸೆ ಆಗಿಲ್ಲ’ ಎಂದು ದರ್ಶನ್ ಪರ ವಕೀಲರು ಹೇಳಿದ್ದರು. ಈಗ ದರ್ಶನ್ ಅವರು ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳದೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.