ಇಂದು ಪರಪ್ಪನ ಅಗ್ರಹಾರದಿಂದ ಪವಿತ್ರ ಗೌಡ ಬಿಡುಗಡೆ

(ನ್ಯೂಸ್ ಕಡಬ) newskadaba.com ಡಿ. 16 ಬೆಂಗಳೂರು:  ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ  ಜೈಲು ಸೇರಿದ್ದ ಪವಿತ್ರಾ ಗೌಡ ಇಂದು ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಲಿದ್ದಾರೆ. 6 ತಿಂಗಳ ಹಿಂದೆ ಜೈಲು ಸೇರಿದ್ದ ದರ್ಶನ್‌ ಗೆಳತಿ ಪವಿತ್ರಾ ಗೌಡ ಮತ್ತು ಇತರರಿಗೆ ಶುಕ್ರವಾರ ಹೈಕೋರ್ಟ್‌ನ ನ್ಯಾ. ಎಸ್‌.ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿತ್ತು.

ಪರಪ್ಪನ ಅಗ್ರಹಾರದಿಂದ ಪವಿತ್ರಾ, ಅನುಕುಮಾರ್, ಪ್ರದೂಶ್ ಬಿಡುಗಡೆಯಾದರೆ ಶಿವಮೊಗ್ಗ ಜೈಲಿನಿಂದ ಜಗದೀಶ್, ಲಕ್ಷಣ್, ಕಲಬುರಗಿಯಿಂದ ನಾಗರಾಜ್ ರಿಲೀಸ್‌ ಆಗಲಿದ್ದಾರೆ. ಇಂದು ಮಧ್ಯಾಹ್ನ ಹೊತ್ತಿಗೆ ಎಲ್ಲಾ ಆರೋಪಿಗಳು ಜೈಲಿನಿಂದ ಹೊರಬರಲಿದ್ದಾರೆ. ಎಲ್ಲಾ ಆರೋಪಿಗಳು ತಲಾ 1 ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್‌, ಇಷ್ಟೇ ಮೊತ್ತಕ್ಕೆ ಇಬ್ಬರ ಭದ್ರತೆ ನೀಡಬೇಕು ಸೇರಿದಂತೆ ಹಲವು ಷರತ್ತುಗಳನ್ನು ವಿಧಿಸಿದೆ.

Also Read  ಕಾರ್ಕಳ: ಕಾಡಿನಿಂದ ನಾಡಿಗೆ ಆಗಮಿಸಿದ ಚಿರತೆ ► ಮನೆಯಂಗಳದಲ್ಲಿ ಎಲ್ಲರೆದುರೇ ವಿಲವಿಲನೆ ಒದ್ದಾಡಿ ಸಾವು

error: Content is protected !!
Scroll to Top