ನಿರುಪಯುಕ್ತ ಕೊಳವೆಬಾವಿ ಮುಚ್ಚದಿದ್ದರೆ 10 ಸಾವಿರ ದಂಡದೊಂದಿಗೆ 1 ವರ್ಷ ಜೈಲು ಶಿಕ್ಷೆ; ಬೆಳಗಾವಿ ಅಧಿವೇಶನದಲ್ಲಿ ವಿಧೇಯಯಕ ಅಂಗಿಕಾರ

(ನ್ಯೂಸ್ ಕಡಬ) newskadaba.com ಡಿ. 16: ಸ್ಥಗಿತಗೊಂಡ ಕೊಳವೆಬಾವಿಯನ್ನು  ಮುಚ್ಚದಿದ್ದರೆ ಜಮೀನು ಮಾಲೀಕರಿಗೆ 1 ವರ್ಷ ಜೈಲು ಶಿಕ್ಷೆ, 10 ಸಾವಿರ ರೂ. ದಂಡ ವಿಧಿಸುವ ತಿದ್ದುಪಡಿ ವಿಧೇಯಕ ಸೇರಿದಂತೆ ಬೆಳಗಾವಿ ಸುರ್ವಣಸೌಧದಲ್ಲಿ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ 8 ವಿಧೇಯಕಗಳನ್ನು ಅಂಗೀಕರಿಸಲಾಯಿತು.

ವಿಫಲ ಕೊಳವೆಬಾವಿಯನ್ನು ಸೂಕ್ತ ರೀತಿಯಲ್ಲಿ ಮುಚ್ಚದೆ ದುರಂತಕ್ಕೆ ಕಾರಣರಾಗುವವರನ್ನು ಶಿಕ್ಷಿಸಲು ಸಚಿವ ಎನ್.ಎಸ್.ಬೋಸರಾಜು ಅವರು ಮಂಡಿಸಿದ, ಕರ್ನಾಟಕ ಅಂತರ್ಜಲ (ನಿಯಮಾವಳಿ ಮತ್ತು ಅಭಿವೃದ್ಧಿ, ನಿವರ್ಹಣಾ ನಿಯಂತ್ರಣ) ತಿದ್ದುಪಡಿ ವಿಧೇಯಕ-2024 ವಿಧೇಯಕವನ್ನು ಅಧಿವೇಶನದಲ್ಲಿ ಅಂಗೀಕರಿಸಲಾಯಿತು. ಹೊಸ ತಿದ್ದುಪಡಿಯಂತೆ ನಿರುಪಯುಕ್ತ ಅಥವಾ ಸ್ಥಗಿತಗೊಂಡ ಕೊಳವೆಬಾವಿ ಮುಚ್ಚದ ಜಮೀನು ಮಾಲೀಕರಿಗೆ 1 ವರ್ಷ ಜೈಲು ಶಿಕ್ಷೆ, 10 ಸಾವಿರ ರೂ. ದಂಡ ವಿಧಿಸಲಾಗುತ್ತದೆ. ಅದನ್ನು ಕೊರೆದ ಸಂಸ್ಥೆಯ ಮಾಲೀಕರಿಗೆ 1 ವರ್ಷ ಜೈಲು ಶಿಕ್ಷೆ ಮತ್ತು 20 ಸಾವಿರ ರೂ. ದಂಡ ವಿಧಿಸುವ ಅಂಶ ವಿಧೇಯಕದಲ್ಲಿ ಸೇರಿಸಲಾಗಿದೆ. ಸಣ್ಣ ಮಕ್ಕಳು ಕೊಳವೆ ಬಾವಿಗೆ ಬಿದ್ದು ಸಾವನ್ನಪ್ಪುವ, ನಾವು-ಬದುಕಿನ ನಡುವೆ ಹೋರಾಟ ನಡೆಸುವ ಪ್ರಕರಣವನ್ನು ತಪ್ಪಿಸುವ ಉದ್ದೇಶದಿಂದ ಈ ವಿಧೇಯಕವನ್ನು ಅಂಗೀಕರಿಸಲಾಗಿದೆ.

Also Read  ಇನ್ಮುಂದೆ ಅಟೋ ರಿಕ್ಷಾಗಳಲ್ಲಿ ಮಿತಿ ಮೀರಿ ಮಕ್ಕಳ ಸಾಗಾಟ ಮಾಡುವಂತಿಲ್ಲ ➤ ನಿಯಮ ಉಲ್ಲಂಘಿಸಿದ್ದಲ್ಲಿ ಸಾರಿಗೆ ಇಲಾಖೆಯಿಂದ ಕ್ರಮ

error: Content is protected !!
Scroll to Top