(ನ್ಯೂಸ್ ಕಡಬ) newskadaba.com ಡಿ. 17 ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ 821 ವಸತಿ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಉಚಿತ ವಿದ್ಯುತ್ ಪೂರೈಸಲು ಅಂದಾಜು ವೆಚ್ಚ ನಿಗದಿಪಡಿಸಿ ಸಮಾಜ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.
ಸಂಘದ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿಯ 503 ವಸತಿ ಶಾಲೆ ಗಳು, ಪರಿಶಿಷ್ಟ ಪಂಗಡದ 144, ಹಿಂದುಳಿದ ವರ್ಗದ 174 ಸೇರಿ ಒಟ್ಟಾರೆ 821 ವಸತಿ ಶಾಲಾ, ಕಾಲೇಜುಗಳಿವೆ. ಇವುಗಳಿಗೆ ಉಚಿತ ವಿದ್ಯುತ್ ಪೂರೈಸಲು ವಾರ್ಷಿಕ ಅಂದಾಜು 36 ಕೋಟಿ ರು. ಬೇಕಾಗುತ್ತದೆ. 3 ಇಲಾಖೆಗಳು ಕ್ರಮವಾಗಿ 23 ಕೋಟಿ ರು., 6 ಕೋಟಿ ರು. ಮತ್ತು 7 ಕೋಟಿ ರು. ಭರಿಸಬೇಕಾಗುತ್ತದೆ. ಎಸ್ಸಿ, ಎಸ್ಟಿ ವಸತಿ ಶಾಲೆಗಳ 29 ಕೋಟಿ ರು. ವಿದ್ಯುತ್ ಬಿಲ್ ಅನ್ನು ಎಸ್‌ಸಿಎಸ್‌ಪಿ / ಟಿಎಸ್‌ಪಿ ಯೋಜನೆಯಡಿ ಒದಗಿಸುವ ಅನುದಾನದ ಮೂಲಕ ಭರಿಸಬೇಕು.