ಶಬರಿಮಲೆ ಅಯ್ಯಪ್ಪನ ಸನ್ನಿಧಾನದಲ್ಲೇ ಕರ್ನಾಟಕದ ಭಕ್ತ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಡಿ. 17 ಶಬರಿಮಲೆ : ಶಬರಿಮಲೆಯ ಶ್ರೀ ಅಯ್ಯಪ್ಪನ ದೇವಸ್ಥಾನದಲ್ಲಿ, ಸಾವಿರಾರು ಭಕ್ತರ ಮುಂದೆಯೇ ಕರ್ನಾಟಕದ ಭಕ್ತರೊಬ್ಬರು ಮಾಳಿಗೆಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಕರ್ನಾಟಕದ ಕನಕಪುರದ ನಿವಾಸಿ ಕುಮಾರಸ್ವಾಮಿ ಎಂದು ಗುರುತಿಸಲಾಗಿದೆ.

ತುಪ್ಪದ ಅಭಿಷೇಕ ಕೌಂಟರ್‌ಗಳ ಮಂಟಪದ ಮೇಲಿನಿಂದ ಇವರು ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಘಟನೆಯ ವಿಡಿಯೋ ಭಕ್ತರೊಬ್ಬರ ಮೊಬೈಲ್‌ನಲ್ಲಿ ದಾಖಲಾಗಿದ್ದು, ಇದೀಗ ವೈರಲ್‌ ಆಗಿದೆ.

ಶಬರಿಮಲೆಯ ತುಪ್ಪದ ಅಭಿಷೇಕ ಕೌಂಟರ್‌ಗಳ ಮಂಟಪದಿಂದ ಜಿಗಿದು ಕೆಳಗೆ ಬಿದ್ದು ಮೂರ್ಛಾವಸ್ಥೆಗೆ ಹೋದ ಅವರನ್ನು ಅಲ್ಲಿದ್ದವರು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದರು. ಮೇಲಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಕುಮಾರಸ್ವಾಮಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕುಮಾರಸ್ವಾಮಿ ಖಿನ್ನತೆಯಿಂದ ಬಳಲುತ್ತಿದ್ದು, ಈ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Also Read  ಎತ್ತಿನಗಾಡಿ ಓಟದ ಸ್ಪರ್ಧೆ ವೇಳೆ ದುರಂತ ➤ ಚಕ್ರ ಹರಿದು ರೈತ ಮೃತ್ಯು

error: Content is protected !!
Scroll to Top