ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ

(ನ್ಯೂಸ್ ಕಡಬ) newskadaba.com ಡಿ. 17ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಪ್ರಮುಖ ದೂರುದಾರರಾದ ಸ್ನೇಹಮಯಿ ಕೃಷ್ಣ ಅವರು ಕಳೆದ 3 ದಿನಗಳಿಂದ ನಾಪತ್ತೆಯಾಗಿದ್ದಾರೆ ಎನ್ನಲಾಗುತ್ತಿದೆ.

ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ವಿರುದ್ಧ ಕೆಲವೇ ದಿನಗಳ ಹಿಂದೆ ಸೀರೆ ಕಳ್ಳತನದ ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ ಕೃಷ್ಣ ವಿರುದ್ಧ ಕೂಡ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಈ ಬೆಳವಣಿಗೆಯ ಬೆನ್ನಲ್ಲೇ ಸ್ನೇಹಮಯಿ ಕೃಷ್ಣ ಕಾಣೆಯಾಗಿದ್ದಾರೆ. ಇದೀಗ ಪೊಲೀಸರು ಸ್ನೇಹಮಯಿ ಕೃಷ್ಣಗಾಗಿ ಹುಡುಕಾಟ ಆರಂಭಿಸಿದ್ದಾರೆ. ಅವರ ಮೊಬೈಲ್ ಮೂರು ದಿನಗಳಿಂದ ಸ್ವಿಚ್ ಆಫ್ ಆಗಿದೆ ಎಂದು ಹೇಳಲಾಗುತ್ತಿದೆ.

Also Read  ಅಮ್ಮನ ಕ್ಯಾನ್ಸರ್ ಚಿಕಿತ್ಸೆಗಾಗಿ ಸಂಘಟನೆಗೆ ಪತ್ರ ಬರೆದ 11ರ ಬಾಲಕಿ !!

error: Content is protected !!
Scroll to Top