ಉಡುಪಿ: ಹೂಡೆಯಲ್ಲಿ ಗೂಡ್ಸ್ ವಾಹನಕ್ಕೆ ಬೆಂಕಿ; ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com ಡಿ. 17 ಉಡುಪಿ: ತೆಂಗಿನಕಾಯಿ ಕತ್ತ ಸಾಗಿಸುತ್ತಿದ್ದ ವಾಹನಕ್ಕೆ ತಡರಾತ್ರಿ ಬೆಂಕಿ ತಗುಲಿ ಸುಟ್ಟ ಘಟನೆ ಉಡುಪಿಯ ಹೂಡೆಯಲ್ಲಿ ಸಂಭವಿಸಿದೆ.

ವಿದ್ಯುತ್ ತಂತಿ ತಗುಲಿ ಶಾರ್ಟ್ ಸರ್ಕ್ಯೂಟ್ ಆದ ಕಾರಣ ಘಟನೆ ನಡೆದಿದೆ ಎಂದು ಸಾರ್ವಜನಿಕರು ಅಭಿಪ್ರಾಯ ಪಟ್ಟಿದ್ದಾರೆ. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪಕ್ಕದಲ್ಲೆ ವಸತಿ, ಹೊಟೇಲ್, ಕೆಫೆಯಿದ್ದು ಬೆಂಕಿ ವ್ಯಾಪಿಸಿದರೆ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಆದರೆ ಸೂಕ್ತ ಸಮಯದಲ್ಲಿ ಅಗ್ನಿ ಶಾಮಕ ದಳದ ವಾಹನ ಬಂದು ಬೆಂಕಿ ನಂದಿಸಿದ ಕಾರಣ ಸಂಭವನೀಯ ಭಾರೀ ಅನಾಹುತ ತಪ್ಪಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಧೈರ್ಯ, ನಂಬಿಕೆ ಬರುವವರೆಗೆ ಭಾರತ ಸುಭದ್ರವಾಗಲು ಸಾಧ್ಯವಿಲ್ಲ: ಹುಸೈನ್ ಮು‌ಈ‌ನೀ ಮಾರ್ನಾಡ್ ➤‌ ಎಸ್‌ವೈಎಸ್ ಮಾಣಿ ಸೆಂಟರ್ ನಿಂದ ಅಮೃತ ಭಾರತ ಸಂಗಮ

error: Content is protected !!
Scroll to Top