(ನ್ಯೂಸ್ ಕಡಬ) newskadaba.com ಡಿ. 17 ನವದೆಹಲಿ: ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಕೇಂದ್ರ ಸರ್ಕಾರ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಸಂವಿಧಾನಾತ್ಮಕ ತಿದ್ದುಪಡಿ ಮಸೂದೆಯನ್ನು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದೆ.
“ಒಂದು ದೇಶ, ಒಂದು ಚುನಾವಣೆ” ಮಸೂದೆ ಎಂದು ಉಲ್ಲೇಖಿಸಲ್ಪಡುವ ಸಂವಿಧಾನ(ನೂರಾ ಇಪ್ಪತ್ತೊಂಬತ್ತನೇ ತಿದ್ದುಪಡಿ) ತಿದ್ದುಪಡಿ ಮಸೂದೆ, 2024 ಅನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಇಂದು ಲೋಕಸಭೆಯಲ್ಲಿ ಮಂಡಿಸಿದರು. ಈ ಮಸೂದೆಗೆ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದು ಅಸಂವಿಧಾನಿಕ, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತದೆ ಮತ್ತು ಸಂವಿಧಾನದ ಮೂಲ ರಚನೆಯನ್ನು ಉಲ್ಲಂಘಿಸುತ್ತದೆ. ಹೀಗಾಗಿ ಮಸೂದೆ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.