ದರ್ಶನ್ ಜಾಮೀನು ವಿಚಾರ: ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಲು ಪೊಲೀಸರ ಸಿದ್ಧತೆ

(ನ್ಯೂಸ್ ಕಡಬ) newskadaba.com ಡಿ. 17ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್‌ಗೆ ಮತ್ತು ಇತರ ಆರೋಪಿಗಳಿಗೆ ಹೈಕೋರ್ಟ್ ನೀಡಿದ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಲು ಬೆಂಗಳೂರು ಪೊಲೀಸರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸುತ್ತೇವೆ. ಕೋರ್ಟ್ ಗೆ ಹೋಗಲು ತಯಾರಿ ನಡೆದಿದ್ದು ಶೀಘ್ರವೇ ಅರ್ಜಿ ಸಲ್ಲಿಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ ಅವರು ತಿಳಿಸಿದ್ದಾರೆ. ಗೃಹ ಸಚಿವಾಲಯ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ಪೊಲೀಸರು ಚಾರ್ಜ್ಶೀಟ್ ಪ್ರತಿಗಳನ್ನು ಇಂಗ್ಲಿಷ್‌ಗೆ ಭಾಷಾಂತರ ಮಾಡುವ ಪ್ರಕ್ರಿಯೆ ನಡೆಸುತ್ತಿದ್ದರು. ಸದ್ಯ ಈ ಎಲ್ಲಾ ಪ್ರಕ್ರಿಯೆಗಳು ಮುಕ್ತಾಯವಾಗಿದೆ.

Also Read  ಮಂಗಳೂರು: ಮತಾಂತರಕ್ಕೆ ಯತ್ನಿಸಿ ನಾಲ್ವರ ಸಾವಿಗೆ ಕಾರಣಳಾದ ಮಹಿಳೆ ಅಂದರ್..!

error: Content is protected !!
Scroll to Top