ಜಿಎಸ್‍ಟಿ ಜೊತೆ ಆಧಾರ್ ಕಾರ್ಡ್ ಕಡ್ಡಾಯವಾಗಿರುವುದು ನಿಮಗೆ ತಿಳಿದಿದೆಯಾ…?

(ನ್ಯೂಸ್ ಕಡಬ) newskadaba.com ನವದೆಹಲಿ, ಜು.03. ಸ್ವಾತಂತ್ರ್ಯಾನಂತರದ ಅತಿ ದೊಡ್ಡ ತೆರಿಗೆ ಸುಧಾರಣೆ ಎಂದೇ ಬಣ್ಣಿಸಲಾಗುತ್ತಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್‍ಟಿ) ಜುಲೈ 1ರಿಂದ ಜಾರಿಗೆ ಬಂದಿದೆ. ಜಿಎಸ್‍ಟಿ ಜೊತೆ ಆಧಾರ್ ಕಾರ್ಡಿಗೆ ಸಂಬಂಧಿಸಿದಂತೆ ಜುಲೈ 1ರಿಂದ ಇತರೇ ಕ್ಷೇತ್ರಗಳಲ್ಲೂ ಕೆಲ ಬದಲಾವಣೆಯಾಗಿದೆ‌. ಹೀಗಾಗಿ ದೇಶದಲ್ಲಿ ಮತ್ತು ವಿಶ್ವದಲ್ಲಿ ಏನು ಬದಲಾವಣೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
1. ಐಟಿ ರಿಟರ್ನ್: ಜುಲೈ 1ರಿಂದ ಆದಾಯ ತೆರಿಗೆ ಲೆಕ್ಕಪತ್ರ ಮಾಹಿತಿ (ಐಟಿಆರ್) ಸಲ್ಲಿಸಲು ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕೆಂದು ಎಂದು ಕೇಂದ್ರ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ) ಹೇಳಿದೆ. ಆಧಾರ್ ಕಡ್ಡಾಯಗೊಳಿಸುವ ಕಾನೂನಿನ ಸಿಂಧುತ್ವವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿತ್ತು.
2. ಪಾನ್ ಕಾರ್ಡ್: ಬೇರೆ ಬೇರೆ ಪಾನ್ ಕಾರ್ಡ್ ಬಳಸಿಕೊಂಡು ಜನರು ತೆರಿಗೆ ವಂಚಿಸುತ್ತಿರುವ ಹಿನ್ನೆಲೆಯಲ್ಲಿ ಈ ವಂಚನೆಯನ್ನು ತಡೆಗಟ್ಟಲು ಪಾನ್ ಕಾರ್ಡ್ ಗೂ ಆಧಾರ್ ಕಡ್ಡಾಯ ಮಾಡಲಾಗಿದೆ.
3. ಪಾನ್ ಸಿಗಲ್ಲ: ನೀವು ಪಾನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದರೆ ಆಧಾರ್ ನಂಬರ್ ನೀಡಲೇಬೇಕು. ಜುಲೈ 1ರಿಂದ ಆಧಾರ್ ನೀಡದೇ ಇದ್ದರೆ ನಿಮಗೆ ಪಾನ್ ಸಿಗಲ್ಲ.
4. ಪಾಸ್ ಪೋರ್ಟ್ ಸಿಗಲ್ಲ: ವಿದೇಶಾಂಗ ಸಚಿವಾಲಯ ಪಾಸ್ ಪೋರ್ಟ್ ಪಡೆಯಲು ಆಧಾರ್ ಕಡ್ಡಾಯ ಮಾಡಿದೆ. ಆಧಾರ್ ನಂಬರ್ ನೀಡದೇ ಇದ್ದರೆ ನಿಮಗೆ ಪಾಸ್ ಪೋರ್ಟ್ ಸಿಗಲ್ಲ
5. ಪಿಎಫ್: ಉದ್ಯೋಗಿಗಳ ಭವಿಷ್ಯ ನಿಧಿ ಸಂಘ(ಇಪಿಎಫ್‍ಓ) ಪಿಎಫ್ ಖಾತೆಗೆ ಆಧಾರ್ ಲಿಂಕ್ ಮಾಡುವುದನ್ನು ಕಡ್ಡಾಯಮಾಡಿದೆ. ಆಧಾರ್ ಲಿಂಕ್ ಮಾಡಿದ ಬಳಿಕ ಪಿಎಫ್ ಹಣವನ್ನು ತೆಗೆಯುವ ಸಮಯ 20 ದಿನಗಳಿಂದ 10 ದಿನಕ್ಕೆ ಇಳಿಕೆಯಾಗಿದೆ.
6. ರೈಲ್ವೇ ಟಿಕೆಟ್: ರೈಲ್ವೇ ಆನ್‍ಲೈನ್ ಮುಂಗಡ ಟಿಕೆಟ್ ಪಡೆಯಲು ಆಧಾರ್ ಕಡ್ಡಾಯವಾಗಿದೆ. ಹೆಚ್ಚು ಟಿಕೆಟ್‍ಗಳನ್ನು ಒಟ್ಟಿಗೆ ಕಾಯ್ದಿರಿಸುವ ವೇಳೆ ನಡೆಯುವ ಮೋಸ, ನಕಲಿ ಗುರುತಿನ ಚೀಟಿ ಬಳಸಿ ಟಿಕೆಟ್ ಕಾಯ್ದಿರಿಸುವುದು ಮತ್ತು ಇತರ ಕಾನೂನು ಬಾಹಿರ ಚಟುವಟಿಕೆಗಳ ಮೇಲೆ ನಿಯಂತ್ರಣ ತರುವ ನಿಟ್ಟಿನಲ್ಲಿ ಕೇಂದ್ರ ಆಧಾರ್ ಕಡ್ಡಾಯ ಮಾಡಿದೆ.

error: Content is protected !!

Join the Group

Join WhatsApp Group