‘ಪ್ರತಿ ಕ್ರೇತ್ರಕ್ಕೆ ಕನಿಷ್ಟ 26 ಕೋಟಿ ರೂ.ಗೂ ಹೆಚ್ಚು ಅನುದಾನ ಸಿಗಲಿದೆ’- ಸಿಎಂ ಭರವಸೆ

(ನ್ಯೂಸ್ ಕಡಬ) newskadaba.com ಡಿ. 18ಬೆಂಗಳೂರು: ಕನಿಷ್ಟ 26 ಕೋಟಿ ರೂ.ಗೂ ಹೆಚ್ಚು ಹಣ ಒಂದೊಂದು ಕ್ಷೇತ್ರಕ್ಕೆ ಸಿಗಲಿದೆ. ಯಾರು ಬೇಸರ ಮಾಡಿಕೊಳ್ಳಬೇಡಿ ಎಂದು ಕಾಂಗ್ರೆಸ್ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಎಂದು ಭರವಸೆ ನೀಡಿದ್ದಾರೆ.

ನಮ್ಮದೇ ಸರ್ಕಾರ ಇದ್ದರೂ ನಮಗೆ ಅನುದಾನ ಸಿಗುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕರು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ನೋವು ತೋಡಿಕೊಂಡಿದ್ದರು. ಶಾಸಕರು ಬೇಸರ ವ್ಯಕ್ತಪಡಿಸಿದ ಬೆನ್ನಲ್ಲೇ ಸದನದಲ್ಲೇ ಈ ಬಗ್ಗೆ ಘೋಷಣೆ ಮಾಡಿ ನಿರ್ಧಾರ ಪ್ರಕಟಿಸುತ್ತೇನೆ ಎಂದು ಸಿಎಂ ತಿಳಿಸಿದ್ದರು.ಅನುದಾನ ಕೊರತೆ ನೀಗಿಸಲು ಒಟ್ಟು 6 ಸಾವಿರ ಕೋಟಿ ರೂ. ಬಿಡುಗಡೆ ಸಂಬಂಧ ಘೋಷಣೆ ಮಾಡುತ್ತೇನೆ. ಲೋಕೋಪಯೋಗಿ ಇಲಾಖೆಯಿಂದ 4 ಸಾವಿರ ಕೋಟಿ ರೂ., ಗ್ರಾಮೀಣ ಅಭಿವೃದ್ಧಿ ಇಲಾಖೆಯಿಂದ 2 ಸಾವಿರ ಕೋಟಿ ರೂ. ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

Also Read  ಕಾಸರಗೋಡು: ಮೃತಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿ ದೃಷ್ಟಿಯಿಂದ ಎರಡು ಇಲಾಖೆಯಿಂದ ಒಟ್ಟು 6 ಸಾವಿರ ರೂ. ಹಣವನ್ನು ಬಿಡುಗಡೆ ಮಾಡಲಾಗುವುದು. ಕನಿಷ್ಟ 26 ಕೋಟಿ ರೂ.ಗೂ ಹೆಚ್ಚು ಹಣ ಒಂದೊಂದು ಕ್ಷೇತ್ರಕ್ಕೆ ಸಿಗಲಿದೆ. ಯಾರು ಬೇಸರ ಮಾಡಿಕೊಳ್ಳಬೇಡಿ ಎಂದು ಸಿಎಂ ತಿಳಿಸಿದ್ದಾರೆ.

error: Content is protected !!
Scroll to Top