ಮಂಗಳೂರು: ವಿಳಾಸ ಕೇಳುವ ನೆಪದಲ್ಲಿ ಚಿನ್ನದ ಸರ ಕಳವು

(ನ್ಯೂಸ್ ಕಡಬ) newskadaba.com ಡಿ. 18ಮಂಗಳೂರು: ವಿಳಾಸ ಕೇಳುವ ನೆಪದಲ್ಲಿ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಎಳೆದುಕೊಂಡು ಹೋದ ಘಟನೆಗೆ ಸಂಬಂಧಿಸಿದಂತೆ ಬಜಪೆ ಪೊಲೀಸರು ವ್ಯಕ್ತಿಯೋರ್ವನನ್ನು ಬಂಧಿಸಿದ್ದಾರೆ.

ಹಳೆಯಂಗಡಿ ಇಂದಿರಾ ನಗರದ ನಿವಾಸಿ ಅಬ್ದುಲ್ ರವೂಫ್ ಯಾನೆ ಆಟೋ ರವೂಫ್(30) ಬಂಧಿತ ಆರೋಪಿ.ಆರೋಪಿಯು ಮಂಗಳೂರು ತಾಲೂಕು ತೆಂಕ ಎಡಪದವು ಗ್ರಾಮದ ಶಿಬ್ರಿಕೆರೆ ಗಣೇಶ್ ಮಿಲ್ ಬಳಿ ಇರುವ ಒಳ ರಸ್ತೆಯಲ್ಲಿ ಡಿ. 12ರಂದು ನಡೆದುಕೊಂಡು ಮಧ್ಯಾಹ್ನ ವೇಳೆಯಲ್ಲಿ ಹೋಗುತ್ತಿದ್ದ ಒಂಟಿ ಮಹಿಳೆಯ ಬಳಿ ಸ್ಕೂಟರ್‌ನಲ್ಲಿ ಬಂದು ವಿಳಾಸ ಕೇಳುವ ನೆಪದಲ್ಲಿ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಎಳೆದುಕೊಂಡು ಹೋಗಿದ್ದ.

ಆರೋಪಿ ಮತ್ತು ಕಳವು ಮಾಡಿದ ಸೊತ್ತು ಪತ್ತೆಯ ಬಗ್ಗೆ ವಿಶೇಷ ತಂಡ ರಚಿಸಿದ ಬಜಪೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಸಂದೀಪ್ ಜಿ.ಎಸ್. ಅವರು ಆರೋಪಿಯನ್ನು ಪತ್ತೆ ಮಾಡಿದ್ದಾರೆ. ಆರೋಪಿಯಿಂದ ಸುಮಾರು 70,000 ರೂ. ಮೌಲ್ಯದ ಚಿನ್ನದ ಸರ, 50,000 ರೂ. ಮೌಲ್ಯದ ಸ್ಕೂಟರ್, ಸುಮಾರು 50,000 ರೂ. ಮೌಲ್ಯದ ಆಟೋ ರಿಕ್ಷಾ ಮತ್ತು ಇತರ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ತೀರ್ಪು ನೀಡಿದೆ.

Also Read  ವೃದ್ಧ ಮಹಿಳೆಯ ಮೇಲೆ ಹಂದಿಗಳ ದಾಳಿ

error: Content is protected !!
Scroll to Top