(ನ್ಯೂಸ್ ಕಡಬ) newskadaba.com ಡಿ. 18 ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿ ಮೈ ಕೊರೆಯುವ ಚಳಿ ಹೆಚ್ಚಾಗಿದೆ. ಇನ್ನೂ ಎರಡು ದಿನ ಉತ್ತರ ಒಳನಾಡಿನಲ್ಲಿ ಶೀತ ಗಾಳಿ ಬೀಸುವ (cold wave) ಸಾಧ್ಯತೆ ಇದ್ದು, ದಟ್ಟ ಮಂಜು ಆವರಿಸಲಿದೆ. ತಾಪಮಾನ ವಾಡಿಕೆಗಿಂತ 5ರಿಂದ 6 ಡಿಗ್ರಿ ಸೆಲ್ಸಿಯಸ್ ಕಡಿಮೆ ಇರುವ ಸಾಧ್ಯತೆ ಇದ್ದು, ಜನರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಡಿ.18ರಂದು ಬುಧವಾರ ರಾಜ್ಯದಲ್ಲಿ ಒಣ ಹವಾಮಾನ ಚಾಲ್ತಿಯಲ್ಲಿರುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೀದರ್, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಶೀತ ಅಲೆಗಳ ಪರಿಸ್ಥಿತಿ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಕರ್ನಾಟಕದ ಒಳಭಾಗದ ಮೇಲೆ ಪ್ರತ್ಯೇಕವಾದ ಸ್ಥಳಗಳಲ್ಲಿ ದಟ್ಟ ಮಂಜು ಆವರಿಸುವ ಸಾಧ್ಯತೆ ಇದೆ.