(ನ್ಯೂಸ್ ಕಡಬ) newskadaba.com ಡಿ. 18 ಬೆಂಗಳೂರು: ಸಂಬಳ ಹೆಚ್ಚಿಸಬೇಕು ಮತ್ತು 38 ತಿಂಗಳ ಬಾಕಿ ನೀಡುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಡಿಸೆಂಬರ್ 31ರಿಂದ ಅನಿರ್ಧಿಷ್ಟಾವಧಿ ಮುಷ್ಕರ ಮಾಡಲು ನಿರ್ಧರಿಸಿದ್ದಾರೆ. ಈ ಅನಿರ್ದಿಷ್ಟಾವಧಿ ಮುಷ್ಕರದಿಂದ ಸರ್ಕಾರಿ ಬಸ್‌ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ನಿರೀಕ್ಷೆ ಇದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯ ಅನಿರ್ದಿಷ್ಟಾವಧಿ ಮುಷ್ಕರದ ಕುರಿತು ಕೆಎಸ್‌ಆರ್‌ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಷನ್ ಪರವಾಗಿ ಹೆಚ್. ವಿ. ಅನಂತಸುಬ್ಬರಾವ್ ಮಾಹಿತಿ ನೀಡಿದ್ದಾರೆ. ಈ ಮುಷ್ಕರದಿಂದ ಬಸ್ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯೂ ಇದೆ.