(ನ್ಯೂಸ್ ಕಡಬ) newskadaba.com ಡಿ. 19. ರಬ್ಬರ್ ಮಂಡಳಿ ವತಿಯಿಂದ ರಬ್ಬರ್ ಬೆಳೆಗಾರರ ಸಮಾವೇಶ ಡಿಸೆಂಬರ್ 19 ರಂದು ಬೆಳಿಗ್ಗೆ 10 ಗಂಟೆಯಿಂದ ಎಸ್.ಡಿ.ಎಂ ಕಲಾಭವನ ಸಂತೆಕಟ್ಟೆ ಬೆಳ್ತಂಗಡಿಯಲ್ಲಿ ನಡೆಯಲಿದೆ.
ರಬ್ಬರ್ ಮಂಡಳಿಯ ಕಾರ್ಯನಿರ್ವಾಹಕ ನಿರ್ದೇಶಕರು, ಉತ್ಪನ್ನ ಆಯುಕ್ತ ಮತ್ತು ಹಿರಿಯ ಅಧಿಕಾರಿಗಳು ಈ ಸಮಾವೇಶದಲ್ಲಿ ಭಾಗವಹಿಸಿ ರಬ್ಬರ್ ಬೆಳೆಗಾರರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ರಬ್ಬರ್ ಮಂಡಳಿ ಮಂಗಳೂರು ಪ್ರಾದೇಶಿಕ ಕಚೇರಿ ಪ್ರಕಟಣೆ ತಿಳಿಸಿದೆ.