(ನ್ಯೂಸ್ ಕಡಬ) newskadaba.com ಡಿ. 19 ಮುಂಬೈ: ಗೇಟ್‌ವೇ ಆಫ್ ಇಂಡಿಯಾದ ರಾಯಗಡ್ ಕರಾವಳಿಯ ಬಳಿ ನೌಕಾಪಡೆಯ ಸ್ಪೀಡ್‌ಬೋಟ್ ದುರಂತದಲ್ಲಿ ಭಾರತೀಯ ನೌಕಾಪಡೆಯ ನಾವಿಕರು ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ ಮತ್ತು 99 ಜನರನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ.
ನೀಲ್ಕಮಲ್’ ಎಂಬ ಹೆಸರಿನ ಖಾಸಗಿ ಕ್ಯಾಟಮರನ್ ಎಂಬ ಪ್ರಯಾಣಿಕ ಹಡಗು ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಎಲಿಫೆಂಟಾ ಗುಹೆಗಳಿಗೆ ಸುಮಾರು 110 ಪ್ರವಾಸಿಗರು ಮತ್ತು ಐದು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದಾಗ ಈ ದುರಂತ ಸಂಭವಿಸಿದೆ.
ಘಟನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಘಟನೆಯ ಬಗ್ಗೆ ರಾಜ್ಯ ವಿಧಾನಸಭೆಗೆ ವಿವರಿಸಿದ್ದಾರೆ. ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ರಕ್ಷಣಾ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣ ಎಂದು ಪಿಡಬ್ಲ್ಯುಪಿ ಮುಖಂಡ ಜಯಂತ್ ಪಿ.ಪಾಟೀಲ್ ಟೀಕಿಸಿದ್ದಾರೆ. ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಹೊಣೆಗಾರಿಕೆ ಮತ್ತು ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.