(ನ್ಯೂಸ್ ಕಡಬ) newskadaba.com ಡಿ. 19. ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವೀಡಿಯೋಗ್ರಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಗೆ ಡ್ರೋನ್ ತರಬೇತಿಗೆ ಅರ್ಜಿ ಸಲ್ಲಿಸಲು ಡಿಸೆಂಬರ್ 23ರ ವರೆಗೆ ಅವಧಿ ವಿಸ್ತರಿಸಲಾಗಿದೆ.
ಅಭ್ಯರ್ಥಿಯು ದಕ್ಷಿಣ ಕನ್ನಡ ಜಿಲ್ಲೆಯ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ತರಬೇತಿ ಪಡೆಯಲು ಪುರುಷರಿಗೆ 18 ರಿಂದ 35 ವರ್ಷ, ಮಹಿಳೆಯರಿಗೆ 18 ರಿಂದ 40 ವರ್ಷಗಳಾಗಿರಬೇಕು. ಅಭ್ಯರ್ಥಿಯ ಕುಟುಂಬದ ಆದಾಯ ರೂ.2.50 ಮೀರಿರಬಾರದು. ಮೂಲನಿವಾಸಿ ಮತ್ತು ಅಲೆಮಾರಿ/ಅರೆ ಅಲೆಮಾರಿ & ಸೂಕ್ಷ್ಮ/ ಅತಿ ಸೂಕ್ಷ್ಮ ಪರಿಶಿಷ್ಟ ಪಂಗಡದ ಸಮುದಾಯದ ಯುವಕ/ಯುವತಿಯರಿಗೆ ಪ್ರಥಮ ಆದ್ಯತೆ ನೀಡಲಾಗುತ್ತದೆ. ಅಭ್ಯರ್ಥಿಯು ತರಬೇತಿಯ ನೋಂದಣಿ ಸಮಯದಲ್ಲಿ ಕಡ್ಡಾಯವಾಗಿ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ತೇರ್ಗಡೆಗೊಂಡ ಅಂಕಪಟ್ಟಿ ಹಾಗೂ ಆಧಾರ್ ಕಾರ್ಡ್ ನ್ನು ಸಲ್ಲಿಸಬೇಕು.. ಅಭ್ಯರ್ಥಿಯು ತರಬೇತಿ ನೀಡುವ ಸ್ಥಳಕ್ಕೆ ಬರುವ ಪ್ರಯಾಣ ವೆಚ್ಚವನ್ನು ಇಲಾಖೆಯಿಂದ ಭರಿಸುವುದಿಲ್ಲ. ಅಭ್ಯರ್ಥಿಗೆ ತರಬೇತಿ ಅವಧಿಯಲ್ಲಿ ಯಾವುದೇ ಶಿಷ್ಯವೇತನ ನೀಡುವುದಿಲ್ಲ. ಅರ್ಜಿಗಳನ್ನು ಆಯಾ ತಾಲೂಕಿನ ಸಹಾಯಕ ನಿರ್ದೇಶಕರು (ಗ್ರೇಡ್-1&2) ಸಮಾಜ ಕಲ್ಯಾಣ ಇಲಾಖೆ ಕಚೇರಿಯಿಂದ ಪಡೆದುಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಯೋಜನಾ ಸಮನ್ವಯಾಧಿಕಾರಿಯವರ ಕಛೇರಿ, ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ, ಮಂಗಳೂರು (ದೂರವಾಣಿ:0824-2451269) ಕಛೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.