ಜಮ್ಮು ಮತ್ತು ಕಾಶ್ಮೀರ: ಭದ್ರತಾ ಪಡೆಗಳಿಂದ ಎನ್ಕೌಂಟರ್ – ಐವರು ಉಗ್ರರ ಹತ್ಯೆ

(ನ್ಯೂಸ್ ಕಡಬ) newskadaba.com ಡಿ. 19 ಮುಂಬೈ: ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್ ನಡೆದಿದ್ದು ಐವರು ಉಗ್ರರ ಹತ್ಯೆಯಾಗಿದೆ ಎಂದು ವರದಿಯಾಗಿದೆ.

Nk Cake House

ಕುಲ್ಗಾಮ್ ಜಿಲ್ಲೆಯಲ್ಲಿ ಗುರುವಾರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎನ್​ಕೌಂಟರ್​ನಲ್ಲಿ ಯೋಧರು ಐವರು ಉಗ್ರರನ್ನು ಸದೆಬಡಿದಿದ್ದಾರೆ ಎಂದು ಹೇಳಿದ್ದಾರೆ. ಬುಧವಾರ ರಾತ್ರಿ ಜಿಲ್ಲೆಯ ಬೇಹಿಬಾಗ್ ಪ್ರದೇಶದ ಕಡದರ್‌ನಲ್ಲಿ ಶಂಕಿತ ಭಯೋತ್ಪಾದಕರು ಇರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದರಿಂದ ಶೋಧ ಕಾರ್ಯಾಚರಣೆ ಎನ್‌ಕೌಂಟರ್‌ಗೆ ತಿರುಗಿತು ಎಂದು ಅವರು ಹೇಳಿದ್ದಾರೆ.

Also Read  ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯ ಅಮಾನತು ಆದೇಶ ಹಿಂಪಡೆದ ಸರ್ಕಾರ

error: Content is protected !!
Scroll to Top