ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿ..!

(ನ್ಯೂಸ್ ಕಡಬ) newskadaba.com ಡಿ. 19. ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಟ್ರಾವೆಲ್ ವಾಹನವೊಂದು ರಾಷ್ಟ್ರೀಯ ಹೆದ್ದಾರಿ ಮಂಗಳೂರು-ಬೆಂಗಳೂರು ಹೆದ್ದಾರಿಯ ಫರಂಗಿಪೇಟೆ ಎಂಬಲ್ಲಿ ಪಲ್ಟಿಯಾದ ಘಟನೆ ನಡೆದಿದೆ.

ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿರುವ ಟಿ.ಟಿ.ವಾಹನ ಬೆಳಿಗ್ಗೆ 6:30ರ ಸುಮಾರಿಗೆ ಫರಂಗಿಪೇಟೆ ಜಂಕ್ಷನ್ ನಲ್ಲಿ ಡಿವೈಡರ್ ಮೇಲೆ ಏರಿ ಬಳಿಕ ಹೆದ್ದಾರಿಗೆ ಪಲ್ಟಿಯಾಗಿದೆ. ಟಿ.ಟಿ.ಯಲ್ಲಿ ಸುಮಾರು 10 ಮಂದಿ ಪ್ರಯಾಣಿಕರಿದ್ದು, ಯಾವುದೇ ಪ್ರಾಣಾಯಾವಿಲ್ಲದೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಬೆಳಗ್ಗಿನ ಹೊತ್ತು ಚಾಲಕ ನಿದ್ಧೆ ಮಂಪರಿನಲ್ಲಿ ನಿಯಂತ್ರಣ ಕಳೆದು ಡಿವೈಡರ್ ನ ಮೇಲೆ ಹತ್ತಿ ಬಳಿಕ ಪಲ್ಟಿಯಾಗಿದೆ ಎಂದು ಹೇಳಲಾಗಿದೆ. ಘಟನೆಯ ಬಗ್ಗೆ ಯಾವುದೇ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ.

Also Read  ಖಾಸಗಿ ದೃಶ್ಯ ಸೆರೆ ಹಿಡಿದು ವೈರಲ್ ಮಾಡೋದಾಗಿ ಬೆದರಿಕೆ- ಇಬ್ಬರು ಅರೆಸ್ಟ್..!

Nk Cake House

error: Content is protected !!
Scroll to Top