(ನ್ಯೂಸ್ ಕಡಬ) newskadaba.com ಡಿ. 19 ಬೆಂಗಳೂರು: ಹಲವು ವರ್ಷದಿಂದ ಗುತ್ತಿಗೆ ಹಾಗೂ ನೇರ ಪಾವತಿ ಮಹಿಳಾ ಪೌರ ಕಾರ್ಮಿಕರ ಕೆಲಸ ಕಾಯಂ ಆಗಿಇದೀಗ ಬಿಬಿಎಂಪಿಯಲ್ಲಿ ಮಾಡಲಾಗಿದೆ. ಕಾಯಂಗೊಂಡಿರುವ 12 ಸಾವಿರ ಹುದ್ದೆಗಳ ಪೈಕಿ ಸುಮಾರು 8 ಸಾವಿರ ಮಹಿಳಾ ಪೌರಕಾರ್ಮಿಕರನ್ನು ನೇಮಕ ಮಾಡಿಕೊಳ್ಳಲಾಗಿದೆ.
ಇವರು ಗುತ್ತಿಗೆ ಹಾಗೂ ನೇರ ಪಾವತಿಯಡಿ ಕಾರ್ಯ ನಿರ್ವಹಣೆ ಮಾಡಿಕೊಂಡು ಬರುತ್ತಿದ್ದರು. ಕಾಯಂಗೊಳಿಸುವುದಕ್ಕೆ ಕನಿಷ್ಠ ಎರಡು ವರ್ಷ ಅರ್ಹತೆ ಸೂಚಿಸಲಾಗಿತ್ತು. ಒಟ್ಟು 14980 ಪೌರಕಾರ್ಮಿಕರನ್ನು ಕಾಯಂಗೊಳಿಸವುದಕ್ಕೆ ಅಧಿಸೂಚನೆ ಹೊರಡಿಸಲಾಗಿತ್ತು. ಈ ಪೈಕಿ ಇದೀಗ 12,699 ಹುದ್ದೆಗಳಿಗೆ ನೇಮಕ ಮಾಡಲಾಗಿದೆ.
ಇದರಲ್ಲಿ ಬಹುತೇಕ 7,500 ರಿಂದ 8 ಸಾವಿರ ಮಹಿಳಾ ಪೌರ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಶೀಘ್ರದಲ್ಲಿ ನೇಮಕಾತಿಪತ್ರ ವಿತರಣೆ ಮಾಡಲಾಗುವುದು ಎಂದು ಬಿಬಿಎಂಪಿ ಆಡಳಿತ ವಿಭಾಗದ ಉಪ ಆಯುಕ್ತ ಮಂಜುನಾಥ ಸ್ವಾಮಿ ಮಾಹಿತಿ ನೀಡಿದ್ದಾರೆ.