(ನ್ಯೂಸ್ ಕಡಬ) newskadaba.com ಡಿ. 20: ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.
ಕರ್ನಾಟಕದಲ್ಲಿ ಅತಿ ಹೆಚ್ಚು ಕನ್ನಡ ಮಾತನಾಡುವ ಜಿಲ್ಲೆಯೆಂದು ಹೆಸರು ಪಡೆದಿರುವ ಹಾಗೂ ಸಕ್ಕರೆ ನಗರಿ ಎಂದೇ ಪ್ರಸಿದ್ಧವಾಗಿರುವ ಮಂಡ್ಯದಲ್ಲಿ ಆಯೋಜಿಸಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅತ್ಯಂತ ಅಭಿಮಾನದಿಂದ ಹಾಗೂ ಸಂತೋಷದಿಂದ ಉದ್ಘಾಟಿಸಿದರು.
ಶ್ರೀ ಆದಿ ಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ದಿವ್ಯ ಸಾನಿಧ್ಯ ವಹಿಸಿದ್ದರು. ಸಮ್ಮೇಳನಾಧ್ಯಕ್ಷರಾದ ನಾಡೋಜ ಡಾ. ಗೊ.ರು.ಚನ್ನಬಸಪ್ಪ, ಹಿರಿಯ ಸಾಹಿತಿಗಳಾದ ಡಾ. ದೊಡ್ಡರಂಗೇಗೌಡ, ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಾದ ಡಾ ಚಂದ್ರ ಶೇಖರ ಕಂಬಾರ, ವೇದಿಕೆಯ ಮೇಲೆ ಇದ್ದರು.