ಬಂಟ್ವಾಳ: ಶಾಲಾ ವಾರ್ಷಿಕೋತ್ಸವಕ್ಕೆ ಬಂದಿದ್ದ ಯುವತಿಯ ಮೇಲೆ ಅತ್ಯಾಚಾರ; ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಡಿ. 23: ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವತಿಯೋರ್ವಳ ಮೇಲೆ ಯುವಕನೋರ್ವ ಅತ್ಯಾಚಾರ ಮಾಡಿದ ಘಟನೆ ನಡೆದಿರುವ ಬಗ್ಗೆ ತಡವಾಗಿ ವರದಿಯಾಗಿದ್ದು, ಅತ್ಯಾಚಾರ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತೃತ್ವದ ತಂಡ ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

Nk Cake House

ನಾವೂರ ನಿವಾಸಿ ಜಯಂತ ಎಂಬಾತ ಆರೋಪಿಯಾಗಿದ್ದು, ಸದ್ಯ ಜೈಲುವಾಸ ಆನುಭವಿಸುತ್ತಿದ್ದಾನೆ. ಡಿ. 14 ರಂದು ನಾವೂರು ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ನೋಡುಲು ಮನೆಯವರ ಜೊತೆ ತೆರಳಿದ್ದ ಯುವತಿಯನ್ನು ಆರೋಪಿ ಜಯಂತ ಶಾಲಾ ಕೊಠಡಿಯಲ್ಲಿ ಕೂಡಿ ಹಾಕಿ ಅತ್ಯಾಚಾರ ಮಾಡಿದ್ದಾನೆ. ಈ ಬಗ್ಗೆ ನೊಂದ ಯುವತಿಯ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ದೂರು ನೀಡಿದ್ದಳು. ನ್ಯಾಯಾಲಯವು ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Also Read  ಬಂಟ್ವಾಳ: ಮುಂದುವರಿದ ಹೂಕಳ್ಳರ ಹಾವಳಿ ➤ ಸಿಸಿಟಿವಿ ಸೆರೆಯಾದ ಕಳ್ಳತನ ದೃಶ್ಯ ವೈರಲ್

error: Content is protected !!
Scroll to Top