ರಾಜ್ಯದಲ್ಲಿ ಮುಂದಿನ 3 ದಿನ 13 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ಡಿ. 23 ಬೆಂಗಳೂರು: ರಾಜ್ಯದಲ್ಲಿ  ಇಂದಿನಿಂದ ಮೂರು ದಿನ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆಂಧ್ರಪ್ರದೇಶ ಕರಾವಳಿಯ ಪಶ್ಚಿಮ ಬಂಗಾಳ ಕೊಲ್ಲಿಯ ಮೇಲಿನ ವಾಯುಭಾರ ಕುಸಿತ ಆಗಿರುವ ಕಾರಣ ರಾಜ್ಯದ 13 ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಡಿ. 23ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ ಮತ್ತು ಮೈಸೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ‘ಡಿಸೆಂಬರ್ 24ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

Also Read  ಬೆಂಗಳೂರು ರೈಲ್ವೆ ವಿಭಾಗದ ನೇಮಕಾತಿ ಹಗರಣ ಬಯಲು!   ➤  ನಾಲ್ವರು ನಕಲಿ ಟಿಟಿಇಗಳು ಪತ್ತೆ.!!  

ಬೆಂಗಳೂರು, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ಮಂಡ್ಯ, ಕೊಡಗು, ಶಿವಮೊಗ್ಗ, ಚಿತ್ರದುರ್ಗ. ದಾವಣಗೆರೆ ಹಾಗೂ ಕೋಲಾರದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Nk Cake House

error: Content is protected !!