ನಿಷೇಧಿತ ಖಲಿಸ್ತಾನ್ ಕಮಾಂಡೋ ಫೋರ್ಸ್‌ನ ಮೂವರು ಭಯೋತ್ಪಾದಕರು ಎನ್‌ಕೌಂಟರ್

(ನ್ಯೂಸ್ ಕಡಬ) newskadaba.com ಡಿ. 23 ನವದೆಹಲಿ: ನಿಷೇಧಿತ ಸಂಘಟನೆ ಖಲಿಸ್ತಾನ್ ಕಮಾಂಡೋ ಫೋರ್ಸ್‌ನ ಮೂವರು ಭಯೋತ್ಪಾದಕರನ್ನು ಸೋಮವಾರ ಮುಂಜಾನೆ ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯಲ್ಲಿ ಪೊಲೀಸರು ಎನ್‌ಕೌಂಟರ್ ಮಾಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಎನ್‌ಕೌಂಟರ್‌ನಲ್ಲಿ ಹತರಾದ ಖಲಿಸ್ತಾನಿ ಭಯೋತ್ಪಾದಕರನ್ನು ಗುರ್ವಿಂದರ್ ಸಿಂಗ್ (25), ವೀರೇಂದ್ರ ಸಿಂಗ್ ಅಲಿಯಾಸ್ ರವಿ (23), ಮತ್ತು ಜಸ್ಪ್ರೀತ್ ಸಿಂಗ್ ಅಲಿಯಾಸ್ ಪ್ರತಾಪ್ ಸಿಂಗ್ (18) ಎಂದು ಗುರುತಿಸಲಾಗಿದೆ.

Nk Cake House

ಹತರು ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯ ಪೊಲೀಸ್ ಪೋಸ್ಟ್ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದರು ಎಂಬ ವಿಚಾರ ಬೆಳಕಿಗೆ ಬಂದಿದೆ. ಎನ್‌ಕೌಂಟರ್ ಬಳಿಕ ಪೊಲೀಸರು ಎರಡು ಎಕೆ-47 ರೈಫಲ್‌ಗಳು, ಎರಡು ಗ್ಲಾಕ್ ಪಿಸ್ತೂಲ್‌ಗಳು ಮತ್ತು ಹಲವು ಮ್ಯಾಕ್ಸಿನ್ ಜೀವಂತ ಗುಂಡುಗಳನ್ನು ಮೃತರಿಂದ ಸ್ವಾಧೀನಪಡಿಸಿಕೊಂಡಿದ್ದಾರೆ.

Also Read  ನಿಯಂತ್ರಣ ತಪ್ಪಿ 50 ಅಡಿ ಆಳದ ಕಮರಿಗೆ ಉರುಳಿದ ಬಸ್ ➤ ಐವರು ಮೃತ್ಯು..!

error: Content is protected !!
Scroll to Top