ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಆಸಿಡ್ ದಾಳಿ ಸಂತ್ರಸ್ತರಿಗೆ ಉಚಿತ ಚಿಕಿತ್ಸೆ ನಿರಾಕರಿಸುವಂತಿಲ್ಲ- ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು

(ನ್ಯೂಸ್ ಕಡಬ) newskadaba.com ಡಿ. 24: ಅತ್ಯಾಚಾರ, ಆಸಿಡ್ ದಾಳಿ ಮತ್ತು ಲೈಂಗಿಕ ದೌರ್ಜನ್ಯದಿಂದ ಬದುಕುಳಿದವರಿಗೆ ಸರ್ಕಾರಿ, ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಂಗಳು ಉಚಿತ ವೈದ್ಯಕೀಯ ಚಿಕಿತ್ಸೆ ನಿರಾಕರಿಸುವಂತಿಲ್ಲ. ಹೀಗೆ ದೌರ್ಜನ್ಯಕ್ಕೊಳಗಾದವರಿಗೆ ಚಿಕಿತ್ಸೆ ನಿರಾಕರಿಸುವುದು ಅಪರಾಧವಾಗಿದ್ದು, ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಮತ್ತು ಆಡಳಿತ ಮಂಡಳಿಗೆ ದಂಡ ವಿಧಿಸಬಹುದು ಎಂದು ದೆಹಲಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.

16 ವರ್ಷದ ಬಾಲಕಿಯ ಮೇಲೆ ಆಕೆಯ ತಂದೆಯೇ ಅತ್ಯಾಚಾರ ಎಸಗಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಅರ್ಜಿಯ ವಿಚಾರಣೆ ವೇಳೆ ನ್ಯಾ. ಪ್ರತಿಭಾ ಎಂ ಸಿಂಗ್ ಮತ್ತು ಅಮಿತ್ ಶರ್ಮಾ ಅವರ ಪೀಠ ಹಲವು ನಿರ್ದೇಶನಗಳನ್ನು ನೀಡಿದೆ. ಎಲ್ಲಾ ಆಸ್ಪತ್ರೆಗಳು, ನರ್ಸಿಂಗ್ ಹೋಂಗಳು, ಕ್ಲಿನಿಕ್‌ಗಳು, ವೈದ್ಯಕೀಯ ಕೇಂದ್ರಗಳು ಅತ್ಯಾಚಾರ ಸಂತ್ರಸ್ತರು/ಬದುಕುಳಿದವರು, ಪೋಕ್ಸೋ ಪ್ರಕರಣದಲ್ಲಿ ಬದುಕುಳಿದವರು ಮತ್ತು ಲೈಂಗಿಕ ದಾಳಿಗಳಿಂದ ಬದುಕುಳಿದವರು ಇತ್ಯಾದಿಗಳಿಗೆ ಉಚಿತ ವೈದ್ಯಕೀಯ ಆರೈಕೆ ಮತ್ತು ಚಿಕಿತ್ಸೆ ನೀಡುವುದು ಕರ್ತವ್ಯವಾಗಿದೆ ಎಂದು ಹೈಕೋರ್ಟ್ ನಿರ್ದೇಶಿಸಿದೆ.

Also Read  ವಾಯು ಪಡೆಯ ಪೈಲಟ್‌ ಆದ ಚಹಾ ವ್ಯಾಪಾರಿಯ ಮಗಳು

Nk Cake House

ದೆಹಲಿಯ ಪ್ರತಿಯೊಂದು ಆಸ್ಪತ್ರೆಯೂ ವೈದ್ಯಕೀಯ ಸೌಲಭ್ಯಗಳ ಫಲಕ ಅಳವಡಿಸಬೇಕು. ಪ್ರಮುಖವಾಗಿ ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಸಾಮೂಹಿಕ ಅತ್ಯಾಚಾರ, ಆಸಿಡ್ ದಾಳಿಯ ಬಲಿಪಶುಗಳು/ ಬದುಕುಳಿದವರಿಗೆ ಉಚಿತ ಹೊರರೋಗಿ ಮತ್ತು ಒಳರೋಗಿ ವೈದ್ಯಕೀಯ ಚಿಕಿತ್ಸೆ ಲಭ್ಯವಿದೆ ಎಂದು ತಿಳಿಸುವ ಬೋರ್ಡ್ ಅಳವಡಿಸಬೇಕು. ಅಪರಾಧಗಳಲ್ಲಿ ಬದುಕುಳಿದವರನ್ನು ಕೂಡಲೇ ಪರೀಕ್ಷಿಸಬೇಕು. ಅಗತ್ಯವಿದ್ದರೆ ಹೆಚ್‌ಐವಿಯಂತಹ ಲೈಂಗಿಕವಾಗಿ ಹರಡುವ ರೋಗಗಳಿಗೆ ಚಿಕಿತ್ಸೆ ನೀಡಬೇಕು ಎಂದು ಕೋರ್ಟ್ ತೀರ್ಪು ನೀಡಿದೆ.

error: Content is protected !!
Scroll to Top