(ನ್ಯೂಸ್ ಕಡಬ) newskadaba.com ಡಿ. 24 ಬೆಂಗಳೂರು: ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ನಲ್ಲಿ ಎಂಎಲ್ಸಿ ಸಿಟಿ ರವಿ ಅವರು ನನ್ನ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪ ಮಾಡಿದ್ದರು. ಆದರೆ, ಸಿಟಿ ರವಿಯವರು ಈ ಆರೋಪವನ್ನು ಅಲ್ಲಗೆಳದಿದ್ದು, ನಾನು ಅಶ್ಲೀಲ ಪದವನ್ನು ಬಳಕೆ ಮಾಡಿಲ್ಲ ಎಂದು ಹೇಳಿದ್ದರು. ಈ ವಿಚಾರ ಈಗ ರಾಜಕೀಯ ಜಟಾಪಟಿಗೂ ಕಾರಣವಾಗಿದೆ.
ಈ ವಿಚಾರವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ಅಶ್ಲೀಲ ಪದ ಬಳಕೆ ಮಾಡಿಲ್ಲ ಅಂತ ಧರ್ಮಸ್ಥಳ ಮಂಜುನಾಥನ ಮೇಲೆ ಪ್ರಮಾಣ ಮಾಡಿ ಹೇಳಿ, ನೋಡೋಣ. ಬನ್ನಿ ಧರ್ಮಸ್ಥಳಕ್ಕೆ ಪ್ರಮಾಣ ಮಾಡಿ ಹೇಳಿ. ಧರ್ಮಸ್ಥಳಕ್ಕೆ ಬನ್ನಿ, ನಾನೂ ಕೂಡ ಬರುತ್ತೇನೆ ಎಂದು ಸಿಟಿ ರವಿ ಅವರಿಗೆ ಬಹಿರಂಗ ಆಹ್ವಾನ ನೀಡಿದರು.