‘ಒಂದು ರಾಷ್ಟ್ರ ಒಂದು ಚುನಾವಣೆ’: ಜನವರಿ 8ಕ್ಕೆ ಜಂಟಿ ಸದನ ಸಮಿತಿ ಮೊದಲ ಸಭೆ

(ನ್ಯೂಸ್ ಕಡಬ) newskadaba.com ಡಿ. 24: ನವದೆಹಲಿ: ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಿಗೆ ಒಂದೇ ಕಾಲದಲ್ಲಿ ಚುನಾವಣೆ ನಡೆಸುವ ಉದ್ದೇಶದ ಚುನಾವಣಾ ಸುಧಾರಣೆಯ ಮಸೂದೆ ಕುರಿತು ಚರ್ಚಿಸಲು ಜನವರಿ 8 ರಂದು 39 ಸದಸ್ಯರ ಮೊದಲ ಜಂಟಿ ಸಂಸದೀಯ ಸಮಿತಿಯ ಸಭೆ ನಡೆಯಲಿದೆ.

ಬಿಜೆಪಿ ಸದಸ್ಯ ಪಿ ಪಿ ಚೌಧರಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಅಧಿಕಾರಿಗಳು ಮಸೂದೆ ಕುರಿತು ವಿವರ ನೀಡಲಿದ್ದಾರೆ.ಸಂವಿಧಾನ (129 ನೇ ತಿದ್ದುಪಡಿ) ಮಸೂದೆ ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳ ಮಸೂದೆಯನ್ನು ಕಳೆದ ವಾರ ಲೋಕಸಭೆಯಲ್ಲಿ ಮಂಡಿಸಲಾಗಿತ್ತು. ಚಳಿಗಾಲದ ಅಧಿವೇಶನದ ಕೊನೆಯ ದಿನವಾದ ಶುಕ್ರವಾರ ಸಂಸತ್ತಿನ ಜಂಟಿ ಸದನ ಸಮಿತಿಗೆ ಒಪ್ಪಿಸಲಾಗಿತ್ತು.

Also Read  ಡಿ.15ರ ವರೆಗೆ ಭಾರೀ ಮಳೆ ಸಾಧ್ಯತೆ ➤ ಹವಾಮಾನ ಇಲಾಖೆ ಎಚ್ಚರಿಕೆ

Nk Cake House

ಏಕಕಾಲದಲ್ಲಿ ಚುನಾವಣೆ ನಡೆಸುವ ಎರಡು ಕರಡು ಶಾಸನಗಳನ್ನು ಪರಿಶೀಲಿಸುವ ಭಾಗವಾಗಲು ಹೆಚ್ಚಿನ ರಾಜಕೀಯ ಪಕ್ಷಗಳು ಇಚ್ಛೆ ವ್ಯಕ್ತಪಡಿಸಿದ್ದರಿಂದ ಸಮಿತಿಯ ಸದಸ್ಯರ ಸಂಖ್ಯೆಯನ್ನು 31 ರಿಂದ 39 ಕ್ಕೆ ಹೆಚ್ಚಿಸಲು ಸರ್ಕಾರ ನಿರ್ಧರಿಸಿತ್ತು.

error: Content is protected !!
Scroll to Top