ಕಾಸರಗೋಡು: ಸೂಪರ್ ಮಾರ್ಕೆಟ್‌ಗೆ ನುಗ್ಗಿದ ಕಾಡುಹಂದಿ

(ನ್ಯೂಸ್ ಕಡಬ) newskadaba.com ಡಿ. 25 ಕಾಸರಗೋಡು: ಕಾಡುಹಂದಿಯೊಂದು ಸೂಪರ್ ಮಾರ್ಕೆಟ್‌ಗೆ ನುಗ್ಗಿದ ಘಟನೆ ಕುಂಬಳೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಕುಂಬಳೆ ಪೇಟೆಯಲ್ಲಿರುವ ಸೂಪರ್ ಪಾಯಿಂಟ್ ಹೈಪರ್ ಮಾರ್ಕೆಟ್ ನೊಳಗೆ ಮಂಗಳವಾರ ರಾತ್ರಿ 9 ಗಂಟೆಯ ವೇಳೆ ಕಾಡು ಹಂದಿ ಸೂಪರ್ ಮಾರ್ಕೆಟ್ ಗೆ ನುಗ್ಗಿದೆ. ಈ ವೇಳೆ ಬೆರಳೆಣಿಕೆಯ ಗ್ರಾಹಕರು ಹಾಗೂ ಸಿಬ್ಬಂದಿಗಳು ಮಾತ್ರ ಎನ್ನಲಾಗಿದೆ. ಅನಿರೀಕ್ಷಿತವಾಗಿ ಒಳಗೆ ಬಂದ ಹಂದಿಯನ್ನು ಕಂಡು ಗಲಿಬಿಲಿಗೊಂಡ ಸಿಬ್ಬಂದಿಗಳು ಹಾಗೂ ಇತರರು ಬೊಬ್ಬೆ ಹಾಕುವಷ್ಟರಲ್ಲಿ ಹಂದಿ ಹೊರಕ್ಕೆ ಓಡಿ ಹೋಗಿದೆ. ಬಳಿಕ ಹಂದಿ ಶಾಲಾ ರಸ್ತೆಯತ್ತ ಪರಾರಿಯಾಗಿದೆ ಎನ್ನಲಾಗಿದೆ.

Also Read  ಮಂಗಳೂರು: ಇನ್ಮುಂದೆ ಅಕ್ರಮ ಗೋ ಸಾಗಾಟಕ್ಕೆ ಬ್ರೇಕ್

Nk Cake House

error: Content is protected !!
Scroll to Top