ಶಾಸಕ ಮುನಿರತ್ನರ ಮೇಲೆ ಮೊಟ್ಟೆ ಎಸೆತ ಪ್ರಕರಣ; ಎಫ್ಐಆರ್ ದಾಖಲು

(ನ್ಯೂಸ್ ಕಡಬ) newskadaba.com ಡಿ. 26 ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನರ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಮುನಿರತ್ನ ದೂರು ಆಧರಿಸಿ ಎಫ್​ಐಆರ್ ದಾಖಲು ಮಾಡಲಾಗಿದೆ. ಒಳಸಂಚು ರೂಪಿಸಿ ಹಲ್ಲೆ ಮತ್ತು ಕೊಲೆಗೆ ಯತ್ನ ಎಂಬಂತೆ ಮುನಿರತ್ನ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.

ಅದಲ್ಲದೇ, ಮೊಟ್ಟೆ ಎಸೆದವರು ಎಂಬ ಆರೋಪ ಹೊತ್ತವರಿಂದಲೂ ಪ್ರತಿದೂರು ದಾಖಲು ಮಾಡಲಾಗಿದೆ. ತಮ್ಮ ಮೇಲೆ ಗುಂಪು ಕಟ್ಟಿ ಹಲ್ಲೆ ಮಾಡಿದ್ದಾರೆ ಎಂದು ನಂದಿನಿ ಲೇಔಟ್ ಪೊಲೀಸ್ ಠಾಣೆಗೆ ನೀಡಿದ ಪ್ರತಿದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ವಿಶ್ವನಾಥ, ಕೃಷ್ಣಮೂರ್ತಿ, ಚಂದ್ರು ಎಂಬುವವರು ಮೊಟ್ಟೆ ಎಸೆದಿದ್ದಾರೆಂಬ ಆರೋಪ ಎದುರಿಸುತ್ತಿದ್ದು, ಇವರನ್ನು ಘಟನಾ ಸ್ಥಳದಲ್ಲೇ ಬುಧವಾರ ಪೊಲೀಸರು ವಶಕ್ಕೆ ಪಡೆದಿದ್ದರು ಎನ್ನಲಾಗಿದೆ.

Also Read  ಗುತ್ತಿಗಾರು : ಅಕ್ರಮ ಗೋ ಸಾಗಾಟ, ಆರೋಪಿಗಳು ಪೊಲೀಸರ ವಶಕ್ಕೆ.!!

Nk Cake House

error: Content is protected !!
Scroll to Top