ಶಕ್ತಿ ಯೋಜನೆಯಿಂದ ಸರ್ಕಾರಕ್ಕೆ ನಷ್ಟವಾಗುತ್ತಿದ್ದು, ನೌಕರರು ಪ್ರತಿಭಟಿಸುತ್ತಿದ್ದಾರೆ: ಆರ್.ಅಶೋಕ್

(ನ್ಯೂಸ್ ಕಡಬ) newskadaba.com ಡಿ. 26 ಬೆಂಗಳೂರು: ಶಕ್ತಿ ಯೋಜನೆಯಿಂದ ರಾಜ್ಯ ಸರ್ಕಾರಕ್ಕೆ ಭಾರಿ ನಷ್ಟ ಉಂಟಾಗಿದ್ದು, ಇದನ್ನು ವಿರೋಧಿಸಿ ರಾಜ್ಯ ಸಾರಿಗೆ ನಿಗಮದ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಬುಧವಾರ ಹೇಳಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಆರ್ಥಿಕ ನಷ್ಟದಲ್ಲಿದೆ. ಬಸವರಾಜ ರಾಯರೆಡ್ಡಿ ಅವರು ಹಲವು ಬಾರಿ ಹೇಳಿದರೂ ಸಿಎಂ ಸಿದ್ದರಾಮಯ್ಯ ಕೇಳಿಲ್ಲ. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟು ಸಾರಿಗೆ ಇಲಾಖೆಗೆ ನಷ್ಟ ಉಂಟಾಗಿದೆ. ಸಾರಿಗೆ ನೌಕರರು ಧರಣಿ ಮಾಡುತ್ತಿದ್ದು, ಅವರಿಗೆ 4 ಸಾವಿರ ಕೋಟಿ ರೂ. ನೀಡಬೇಕು. ರೈತರಿಗೆ ಒಂದೂವರೆ ಸಾವಿರ ಕೋಟಿ ಸಬ್ಸಿಡಿ ನಾಮ ಹಾಕಿದ್ದಾರೆ ಎಂದು ಕಿಡಿಕಾರಿದರು.

Also Read  ಭೀಕರ ಅಪಘಾತ ➤ ಗರ್ಭಿಣಿ ಸೇರಿ 7 ಮಂದಿ ದುರ್ಮರಣ..!!

Nk Cake House

ನಾಮ ಹಾಕುವುದರಲ್ಲಿ ಕಾಂಗ್ರೆಸ್‌ನವರು ಪಳಗಿದವರು. ಹಾಗಾಗಿ ಈ ವರ್ಷ ಒಂದೂವರೆ ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಮುಂದಿನ ವರ್ಷ ಸಿಎಂ ಸಿದ್ದರಾಮಯ್ಯ ಮನಸ್ಸು ಮಾಡಿ 2 ಲಕ್ಷ ಕೋಟಿ ರೂ. ಸಾಲ ಮಾಡಿದರೆ ಕರ್ನಾಟಕ ಜನ್ಮದಲ್ಲಿ ಮುಂದೆ ಬರಲು ಸಾಧ್ಯವಿಲ್ಲ. ಇನ್ನು ಕರ್ನಾಟಕಕ್ಕೆ ಕೃಷ್ಣರಾಜಸಾಗರ ಅಣೆಕಟ್ಟನ್ನು ನೀಡಿದ ಮನೆತನದವರ ಹೆಸರನ್ನು ತೆಗೆದು ಕೆ.ಆರ್.ರಸ್ತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಇಡುವುದು ಒಳ್ಳೆಯ ಬೆಳವಣಿಗೆ ಅಲ್ಲ. ಹಾಗೇನಾದರೂ ಹೆಸರು ಇಡಬೇಕು ಎಂದಿದ್ದರೆ ಹೊಸ ರಸ್ತೆಯೊಂದನ್ನು ನಿರ್ಮಿಸಿ ಅವರ ಹೆಸರು ಅಥವಾ ಅವರ ಕುಟುಂಬದವರ ಹೆಸರನ್ನು ಇಡಲಿ. ಮಹಾರಾಜರ ಕುಟುಂಬ ಈ ನಾಡಿಗೆ ಸೇವೆ ಸಲ್ಲಿಸಿದೆ. ಅನ್ನ-ನೀರು ಕೊಟ್ಟಿದೆ. ಮಾರಿ ಕಣ್ಣು ಹೋರಿ ಮೇಲೆ ಎನ್ನುವಂತೆ ಆ ಕುಟುಂಬವನ್ನು ಗುರಿ ಮಾಡಬಾರದು. ಸಿಎಂ ಸಿದ್ದರಾಮಯ್ಯ ಅವರು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದು, ಅವರು ಇಂತಹ ಕೆಲಸಕ್ಕೆ ಕೈ ಹಾಕುತ್ತಾರೆಂದರೆ ಜನರಿಗೆ ಅವರ ಬಗ್ಗೆ ಇರುವ ಭಾವನೆ ಬದಲಾಗುತ್ತದೆ ಎಂದರು.

Also Read  ಪುತ್ತೂರು: ಎಪಿಎಂಸಿ ಬಳಿ ಅಕ್ರಮ ಮದ್ಯ ಸಾಗಾಟ ಪತ್ತೆ ➤ ಆರೋಪಿ ಅರೆಸ್ಟ್

error: Content is protected !!
Scroll to Top