(ನ್ಯೂಸ್ ಕಡಬ) newskadaba.com ಡಿ. 26 ಕೋಝಿಕ್ಕೋಡ್: ಖ್ಯಾತ ಮಲಯಾಳಂ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಎಂ ಟಿ ವಾಸುದೇವನ್ ನಾಯರ್ ರವರು ಬುಧವಾರ ನಿಧನರಾಗಿದ್ದಾರೆ.
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರು ಕೋಝಿಕ್ಕೋಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಹೃದ್ರೋಗ ಮತ್ತು ಉಸಿರಾಟದ ತೊಂದರೆಯಿಂದ 11 ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿತ್ತು. ಅವರ ಚಿಕಿತ್ಸೆಗಾಗಿ ವಿಶೇಷ ವೈದ್ಯಕೀಯ ತಂಡವನ್ನೂ ರಚಿಸಲಾಗಿತ್ತು. ಆದರೆ ನಿನ್ನೆ ರಾತ್ರಿ ಮೂತ್ರಪಿಂಡ ಮತ್ತು ಹೃದಯ ವೈಫಲ್ಯದಿಂದ ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.