ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ; ನಾಳೆ ರಾಜ್ಯಾದ್ಯಂತ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಡಿ. 26. 92ನೇ ವಯಸ್ಸಿನಲ್ಲಿ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನ ಮಂತ್ರಿ, ಖ್ಯಾತ ಆರ್ಥಿಕ ತಜ್ಞ ಡಾ.ಮನಮೋಹನ್ ಸಿಂಗ್ ವಿಧಿವಶರಾಗಿದ್ದಾರೆ. ಅವರನ್ನು ದೆಹಲಿಯ ಏಮ್ಸ್‌ ಆಸ್ಪತ್ರೆಗೆ ಇಂದು ರಾತ್ರಿ ದಾಖಲಿಸಲಾಗಿತ್ತು.

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮನಮೋಹನ್‌ ಸಿಂಗ್‌ ಅವರನ್ನು ಆಸ್ಪತ್ರೆಗೆ ಸೇರಿಸುವಾಗಲೇ ಅವರ ಸ್ಥಿತಿ ಚಿಂತಾಜನಕವಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಹಿನ್ನೆಲೆ ನಾಳೆ ಕರ್ನಾಟಕ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ನಾಳೆ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಇರಲಿದೆ.

Also Read  ವರದಕ್ಷಿಣೆ ಕಿರುಕುಳ ಪ್ರಕರಣ ನಟಿ ಅಭಿನಯಾಗೆ ತಾತ್ಕಾಲಿಕ ರಿಲೀಫ್ 

ಮನಮೋಹನ್ ಸಿಂಗ್ ಅವರ ನಿಧನದ ಗೌರವಾರ್ಥವಾಗಿ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಜೊತೆಗೆ ಎಲ್ಲ ಸರ್ಕಾರಿ ಕಾರ್ಯಕ್ರಮಗಳನ್ನು ಈಗಾಗಲೇ ಒಂದು ವಾರಗಳ ಕಾಲ ರದ್ದು ಮಾಡುವುದಾಗಿ ಡಿಸಿಎಂ ಡಿಕೆ ಶಿವಕುಮಾರ್‌ ಅವರು ತಿಳಿಸಿದ್ದಾರೆ.

error: Content is protected !!
Scroll to Top