ಮನಮೋಹನ್‌ ಸಿಂಗ್‌ಗೆ ಸಿಖ್‌ ಸಂಪ್ರದಾಯದಂತೆ ಅಂತ್ಯಕ್ರಿಯೆ; ಪಾರ್ಥಿವ ಶರೀರಕ್ಕೆ ಹೆಗಲು ಕೊಟ್ಟ ರಾಹುಲ್‌ ಗಾಂಧಿ

(ನ್ಯೂಸ್ ಕಡಬ) newskadaba.com ಡಿ. 28: ಗುರುವಾರ ರಾತ್ರಿ ವಿಧಿವಶರಾದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಕೆಂಪು ಕೋಟೆಯ ಹಿಂಭಾಗದಲ್ಲಿರುವ ನಿಗಮ್‌ಬೋಧ್‌ಘಾಟ್‌ನಲ್ಲಿ ಸಿಖ್‌ ಸಂಪ್ರದಾಯ ಪ್ರಕಾರ ಮನಮೋಹನ್‌ ಸಿಂಗ್‌ ಅವರ ಅಂತ್ಯಕ್ರಿಯೆ ನಡೆಸಲಾಯಿತು.

ಇಂದು ಬೆಳಗ್ಗೆ 9.30ರವರೆಗೆ ಸಿಂಗ್‌ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕಾಗಿ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಇಡಲಾಗಿತ್ತು. ನಂತರ ನಿಗಮ್‌ಬೋಧ್‌ ಘಾಟ್‌ವರೆಗೆ ಅಂತಿಮ ಯಾತ್ರೆ ನಡೆಸಲಾಯಿತು. ನಿಗಮ್‌ಬೋಧ್‌ ಘಾಟ್‌ನಲ್ಲಿ ಅವರ ಪಾರ್ಥೀವ ಶರೀರಕ್ಕೆ ಮೂರು ಸೇನೆಗಳು ಅಗಲಿದ ದಿಗ್ಗಜನಿಗೆ ಗೌರವ ನಮನ ಸಲ್ಲಿಸಿದವು.

Also Read  ಹಿರಿಯ ನಟ ಮಿಥುನ್ ಚಕ್ರವರ್ತಿಗೆ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಗೌರವ

Nk Cake House

ಇನ್ನು ಅಂತ್ಯಕ್ರಿಯೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್‌ ಶಾ, ಸಿಎಂ ಸಿದ್ದರಾಮಯ್ಯ, ಸೋನಿಯಾ ಗಾಂಧಿ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಇನ್ನು ಸಿಂಗ್‌ ಪಾರ್ಥೀವ ಶರೀರಕ್ಕೆ ಹೆಗಲು ಕೊಡುವ ಮೂಲಕ ರಾಹುಲ್‌ ಗಾಂಧಿ ವಿಶೇಷ ಗೌರವ ತೋರಿದರು.

error: Content is protected !!
Scroll to Top