(ನ್ಯೂಸ್ ಕಡಬ) newskadaba.com ಡಿ. 28: ಸಾರಿಗೆ ಇಲಾಖೆಯನ್ನು ಸಮಾಧಿ ಮಾಡುವ ಮಟ್ಟಕ್ಕೆ ಈ ಸರಕಾರ ತಂದು ನಿಲ್ಲಿಸಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಅವರು ಆಕ್ಷೇಪಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರಿಗೆ ಇಲಾಖೆ ನೌಕರರು ನಾಳೆಯಿಂದ ಪ್ರತಿಭಟನೆ ನಡೆಸಲು ಕರೆ ನೀಡಿದ್ದಾರೆ.ಸಾರಿಗೆ ಇಲಾಖೆ ನೌಕರರ ಜೊತೆಗೆ ಬಿಜೆಪಿ ನಿಲ್ಲಲಿದೆ. ಸಾರಿಗೆ ಇಲಾಖೆ ಸಚಿವರಿಗೆ ತನ್ನ ಇಲಾಖೆಯ ಆರ್ಥಿಕ ಸ್ಥಿತಿಗತಿಯೇನೆಂದು ಅರ್ಥವಾಗಿಲ್ಲದೇ ಇರುವುದು ದುರಂತ ಎಂದು ಟೀಕಿಸಿದರು. ಸಚಿವ ರಾಮಲಿಂಗಾರೆಡ್ಡಿಯವರು ಇಲಾಖೆ ಲಾಭದಲ್ಲಿದೆ ಎನ್ನುತ್ತಾರೆ. ಸಚಿವರೇ ಇಷ್ಟು ಅಜ್ಞಾನಿಗಳಾದರೆ ಇನ್ನು ಜನಸಾಮಾನ್ಯರ ಪಾಡೇನು; ಇದು ರಾಜ್ಯದ ದುರ್ದೈವ ಎಂದು ವ್ಯಂಗ್ಯವಾಡಿದರು.
700 ಕೋಟಿ ಮೊತ್ತವನ್ನು ಠೇವಣಿ ಇಟ್ಟಿದ್ದರು ಎಂದರು.ಸರಕಾರ ಸಂಪೂರ್ಣ ದಿವಾಳಿಯಾಗಿದೆ. ಪ್ರಾಮಾಣಿಕ ಅಧಿಕಾರಿಗಳು ಶೇಖರಿಸಿಟ್ಟ ಆಸ್ತಿಯನ್ನು ಮಾರಾಟ ಮಾಡಲು ಈ ಸರಕಾರ ಹೊರಟಿದೆ. ಅಧಿಕಾರಿಗಳು, ಸಿಬ್ಬಂದಿಗೆ ಸಂಬಳ ಕೊಡಲಾಗದೇ ಇರುವುದೇ ಇದಕ್ಕೆ ಕಾರಣ ಎಂದು ವಿಶ್ಲೇಷಿಸಿದರು.