(ನ್ಯೂಸ್ ಕಡಬ) newskadaba.com ಡಿ.30: ಅಣ್ಣಾ ವಿಶ್ವವಿದ್ಯಾನಿಲಯದಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಆಕ್ರೋಶದ ನಡುವೆಯೇ ನಟ ಕಮ್ ರಾಜಕಾರಣಿ ವಿಜಯ್ ಇಂದು ಮಧ್ಯಾಹ್ನ 1 ಗಂಟೆಗೆ ಚೆನ್ನೈನಲ್ಲಿ ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ಅವರನ್ನು ಭೇಟಿ ಮಾಡಲಿದ್ದಾರೆ.
ಡಿಸೆಂಬರ್ 23 ರಂದು ಅಣ್ಣಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿನಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ತಮಿಳುನಾಡಿನಾದ್ಯಂತ ಪ್ರತಿಭಟನೆಯನ್ನು ಹುಟ್ಟುಹಾಕಿದೆ. ಘಟನೆಗೆ ಸಂಬಂಧಿಸಿ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ.
ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಮತ್ತು ಅಖಿಲ ಭಾರತ ಮಹಿಳಾ ಕಲ್ಯಾಣ ಒಕ್ಕೂಟವು ಅಣ್ಣಾ ವಿಶ್ವವಿದ್ಯಾಲಯದ ಗಿಂಡಿ ಕ್ಯಾಂಪಸ್‌ನ ಹೊರಗೆ ಪ್ರತಿಭಟನೆ ನಡೆಸಿದ್ದಾರೆ. ಶಿಕ್ಷಣ ಸಂಸ್ಥೆಗಳಲ್ಲಿ ಮಹಿಳೆಯರಿಗೆ ನ್ಯಾಯ ಮತ್ತು ಕಟ್ಟುನಿಟ್ಟಾದ ಭದ್ರತಾ ಕ್ರಮಗಳಿಗಾಗಿ ಹೋರಾಟದ ಮೂಲಕ ಒತ್ತಾಯಿಸಿದ್ದಾರೆ.