ದರ್ಶನ್ ಜಾಮೀನು ರದ್ದಿಗೆ ಮೇಲ್ಮನವಿ ಸಲ್ಲಿಕೆಗೆ ಗ್ರೀನ್ ಸಿಗ್ನಲ್ ನೀಡಿದ ಸರ್ಕಾರ



(ನ್ಯೂಸ್ ಕಡಬ) newskadaba.com ಡಿ.30: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು, ದರ್ಶನ್ ಜಾಮೀನು ರದ್ದಿಗೆ ಮೇಲ್ಮನವಿ ಸಲ್ಲಿಸಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.







ದರ್ಶನ್ ಜಾಮೀನು ರದ್ದಿಗೆ ಮೇಲ್ಮನವಿ ಸಲ್ಲಿಕೆಗೆ ಗೃಹ ಇಲಾಖೆ ಅಧಿಕಾರಿಗಳಿಂದ ಪೊಲೀಸ್ ಇಲಾಖೆಗೆ ಆದೇಶ ದೊರೆತಿದೆ. ಬೆಂಗಳೂರು ಪೊಲೀಸರ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ವಾದಿಸಲು ಅನಿಲ್ ಸಿ ನಿಶಾನಿ ಹಾಗೂ ಹಿರಿಯ ವಕೀಲ ಸಿದ್ದಾರ್ಥ್ ಲುಥಾರ ಅವರನ್ನು ನೇಮಿಸಲಾಗಿದೆ. ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಲು ಗ್ರೀನ್ ಸಿಗ್ನಲ್ ನೀಡಿದ ಹಿನ್ನಲೆ ಎರಡ್ಮೂರು ದಿನಗಳಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಸ್ಪೆಷಲ್ ಲೀವ್ ಪಿಟಿಷನ್ ಸಲ್ಲಿಕೆಯಾಗುವ ಸಾಧ್ಯತೆಯಿದೆ. ಪವಿತ್ರಗೌಡ, ದರ್ಶನ್ ಸೇರಿದಂತೆ ಎಲ್ಲಾ 7 ಜನ ಆರೋಪಿಗಳ ವಿರುದ್ಧ ಸುಪ್ರೀಂ ಮೆಟ್ಟಿಲೇರಲು ಬೆಂಗಳೂರು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ.






Nk Cake House

error: Content is protected !!
Scroll to Top