ಪುತ್ತೂರು: ಚರಂಡಿಯ ಮೇಲ್ಭಾಗದ ಪೈಪ್‌ ನಲ್ಲಿ ಸಿಲುಕಿದ ಮಹಿಳೆ; ರಕ್ಷಣೆ

(ನ್ಯೂಸ್ ಕಡಬ) newskadaba.com ಡಿ.30: ಮುಖ್ಯರಸ್ತೆ ಬದಿಯ ಚರಂಡಿಯ ಮೇಲ್ಭಾಗದಲ್ಲಿ ಹಾಕಲಾಗಿದ್ದ ಪೈಪ್‌ನಲ್ಲಿ ಮಹಿಳೆಯ ಕಾಲು ಸಿಲುಕಿದ ಘಟನೆ ಸೋಮವಾರ ಸಂಜೆ ಪುತ್ತೂರಿನಲ್ಲಿ ನಡೆದಿದೆ.

ಪುತ್ತೂರು ನಗರದ ಹೂವಿನ ಮಾರುಕಟ್ಟೆ ಪಕ್ಕದಲ್ಲೇ ಕಾಲನಿಗೆ ಹೋಗುವ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮುಖ್ಯರಸ್ತೆಯಿಂದ ಕಾಲನಿ ರಸ್ತೆಗೆ ತಿರುಗುವ ಪ್ರದೇಶದಲ್ಲಿ ಚರಂಡಿಗೆ ಪೈಪ್‌ಲೈನ್ ಹಾಕಲಾಗಿತ್ತು. ಇದು ಕೆಲವು ಸಮಯಗಳಿಂದ ತುಂಡಾಗಿದ್ದು, ಸಂಬಂಧಪಟ್ಟವರಿಗೆ ಈ ಬಗ್ಗೆ ವಿಷಯ ತಿಳಿಸುವ ಪ್ರಯತ್ನ ನಡೆಸಲಾಗಿತ್ತು.ಆದರೂ ಈ ಬಗ್ಗೆ ನಗರಾಡಳಿತ ಎಚ್ಚೆತ್ತುಕೊಂಡಿರಲಿಲ್ಲ. ಸೋಮವಾರ ಸಂಜೆ ಪುತ್ತೂರಿಗೆ ಆಗಮಿಸಿದ್ದ ಮಹಿಳೆಯೊಬ್ಬರು ಪೈಪ್‌ಲೈನೊಳಗಡೆ ಕಾಲಿಟ್ಟಿದ್ದಾರೆ. ಪರಿಣಾಮ ಕಾಲು ಪೈಪ್‌ನಲ್ಲಿ ಸಿಲುಕಿದೆ. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಪೈಪ್‌ಲೈನ್ ಅನ್ನು ಕತ್ತರಿಸಿ ಮಹಿಳೆಯನ್ನು ರಕ್ಷಿಸಿದ್ದಾರೆ.

Also Read  ಜೂನ್ 21 ರಂದು ವಿಶ್ವಯೋಗ ದಿನಾಚರಣೆ

Nk Cake House

error: Content is protected !!
Scroll to Top