(ನ್ಯೂಸ್ ಕಡಬ) newskadaba.com ಡಿ.31: ಹೊಸದಿಲ್ಲಿ : ಕೇರಳ ಸರ್ಕಾರದ ಕೋರಿಕೆಯಂತೆ ವಯನಾಡ್ ಭೂಕುಸಿತವನ್ನು ತೀವ್ರ ಸ್ವರೂಪದ ವಿಪತ್ತು ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಕಾಂಗ್ರೆಸ್ ನಾಯಕಿ ಮತ್ತು ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ಅವರು ಈ ನಿರ್ಧಾರವನ್ನು ಸ್ವಾಗತಿಸಿದ್ದು ಮತ್ತು ಇದು ಪುನರ್ವಸತಿಗೆ ಸಹಾಯ ಮಾಡುತ್ತದೆ ಎಂದು ಹೇಳಿದರು.
“ವಯನಾಡ್ ದುರಂತವನ್ನು ʼತೀವ್ರ ಸ್ವರೂಪದ ವಿಪತ್ತುʼ ಎಂದು ಘೋಷಿಸಲು ಅಮಿತ್ ಶಾ ಅವರು ಅಂತಿಮವಾಗಿ ನಿರ್ಧಾರ ತೆಗೆದುಕೊಂಡಿದ್ದಾರೆ. ಇದು ಪುನರ್ವಸತಿಯನ್ನು ಎದುರುನೋಡುತ್ತಿರುವ ನಿರಾಶ್ರಿತರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಸರಿಯಾದ ಹೆಜ್ಜೆಯಾಗಿದೆ. ಅದಕ್ಕಾಗಿ ಅಗತ್ಯವಿರುವ ಹಣವನ್ನು ಆದಷ್ಟು ಬೇಗ ಮಂಜೂರು ಮಾಡಬೇಕು. ಅದಕ್ಕಾಗಿ ನಾವೆಲ್ಲರೂ ಕೃತಜ್ಞರಾಗಿರುತ್ತೇವೆ” ಎಂದು ಪ್ರಿಯಾಂಕಾ ಗಾಂಧಿ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.