(ನ್ಯೂಸ್ ಕಡಬ) newskadaba.com ಡಿ.31: ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ಎರಡನೇ ಭಾರಿಗೆ ಆಯ್ಕೆಯಾಗಿರುವ ಸಿ.ಎಸ್. ಷಡಾಕ್ಷರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಸಂಘದಿಂದ ಅಭಿನಂದನೆ ಸಲ್ಲಿಸಿದ್ದಾರೆ.
ಸಿಎಂ ಗೃಹಕಚೇರಿ ಕೃಷ್ಣದಲ್ಲಿ ಸೋಮವಾರ ಸಂಜೆ ಜಿಲ್ಲೆ, ತಾಲೂಕು ಪದಾಧಿಕಾರಿಗಳು ಹಾಗೂ ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರ ನಿಯೋಗದೊಂದಿಗೆ ಸಿಎಂ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಲಾಯಿತು. ಇದೇ ಸಂಧರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವ ಸಂಬಂಧ ಸರ್ಕಾರದಿಂದ ರಚಿತವಾಗಿರುವ ಅಧಿಕಾರಿಗಳ ಸಮಿತಿಯಿಂದ ಶೀಘ್ರ ವರದಿ ಪಡೆದು ಹಳೆ ಪಿಂಚಣಿ ಯೋಜನೆಯನ್ನು ಮರು ಜಾರಿ ಗೊಳಿಸುವಂತೆ ಮನವಿ ಮಾಡಲಾಯಿತು. ಈ ವಿಷಯವಾಗಿ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಗಳು ಸಮಿತಿಯಿಂದ ಶೀಘ್ರ ವರದಿ ಪಡೆದು ಈಡೇರಿಸುವ ಭರವಸೆ ನೀಡಿದ್ದಾರೆ.