(ನ್ಯೂಸ್ ಕಡಬ) newskadaba.com ಡಿ.31 ಬೆಂಗಳೂರು: ಬೀದರ್ ಗುತ್ತಿಗೆದಾರರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ಮತ್ತಷ್ಟು ತೀವ್ರಗೊಳಿಸಿದೆ. ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿ ಬಿಜೆಪಿ ನಾಯಕರು ಪೋಸ್ಟರ್ ಅಭಿಯಾನ ನಡೆಸಿದರು.
ಬಿಜೆಪಿ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಸಿಟಿ ರವಿ ಹಾಗೂ ರವಿಕುಮಾರ್ ಸೇರಿದಂತೆ ಅನೇಕ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಗುತ್ತಿಗೆದಾರ ಸಚಿವ ಸಾವಿಗೆ ಸಚಿವ ಪ್ರಿಯಾಂಕ್ ಖರ್ಗೆ ಅವರೇ ಹೊಣೆಗಾರರು ಎಂದು ಘೋಷಣೆ ಕೂಗಿದರು. ಕೈಲಿದ್ದ ಪೋಸ್ಟರ್ ಅಂಟಿಸಿ ಆಕ್ರೋಶ ಹೊರ ಹಾಕಿದರು.