ಸಾರಿಗೆ ನೌಕರರಿಗೆ ನಗದು ರಹಿತ ವೈದ್ಯಕೀಯ ಸೇವೆ: ಜನವರಿಯ ಮೊದಲ ವಾರದಲ್ಲಿ ಯೋಜನೆಗೆ ಚಾಲನೆ

(ನ್ಯೂಸ್ ಕಡಬ) newskadaba.com .01 ಬೆಂಗಳೂರು: ಸಾರಿಗೆ ನೌಕರರಿಗೆ ನಗದು ರಹಿತ ವೈದ್ಯಕೀಯ ಸೇವೆ ಒದಗಿಸುವ ಯೋಜನೆಗೆ ರಾಜ್ಯ ಸರ್ಕಾರ ಜನವರಿ ಮೊದಲ ವಾರದಲ್ಲಿ ಚಾಲನೆ ನೀಡಲಿದೆ.

ಈ ಯೋಜನೆಯಡಿ, ಚಾಲಕರು ಮತ್ತು ಕಂಡಕ್ಟರ್‌ಗಳು ಮತ್ತು ಅವರ ಕುಟುಂಬದ ಸದಸ್ಯರು ರಾಜ್ಯದಾದ್ಯಂತ 240 ಆಸ್ಪತ್ರೆಗಳಲ್ಲಿ ನಗದು ರಹಿತ ಚಿಕಿತ್ಸೆಗೆ ಅರ್ಹರಾಗಿರುತ್ತಾರೆ. ಈ ಮೊದಲು ನೌಕರರು ಚಿಕಿತ್ಸೆಗೆ ಮೊದಲು ಹಣವನ್ನು ಪಾವತಿ ಮಾಡಬೇಕಿತ್ತು. ನಂತರ ಹಣವನ್ನು ಮರುಪಾವತಿ ಮಾಡಲಾಗುತ್ತಿತ್ತು. ಯೋಜನೆಯಡಿ ಇದೀಗ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸೇರಿದಂತೆ ಗೊತ್ತುಪಡಿಸಿದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ “ಕಾರ್ಡ್” ಮೂಲಕ ನಗದು ರಹಿತ ಚಿಕಿತ್ಸೆಯನ್ನು ಪಡೆಯಬಹುದಾಗಿದೆ.

Also Read  ➤ ಶಿವಮೊಗ್ಗದಲ್ಲಿ ಇಂದು ಪ್ರಧಾನಿಯವರಿಂದ ವಿಮಾನ ನಿಲ್ದಾಣ ಉದ್ಘಾಟನೆ

Nk Cake House

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ನಗದು ರಹಿತ ಚಿಕಿತ್ಸಾ ಸೌಲಭ್ಯ ಒದಗಿಸುವಂತೆ ಮನವಿಗಳು ಬಂದಿದ್ದವು. ಹೀಗಾಗಿ ಸರ್ಕಾರ ಸಾರಿಗೆ ನೌಕರರ ಅನುಕೂಲಕ್ಕಾಗಿ ಹಲವು ಹೊಸ ಉಪಕ್ರಮಗಳನ್ನು ಪರಿಚಯಿಸುತ್ತಿದೆ. ಈ ಯೋಜನೆಯಡಿ ನೌಕರರಿಗೆ “ಕಾರ್ಡ್” ನೀಡಲಾಗುವುದು, ಕಾರ್ಡ್ ಮೂಲಕ ರಾಜ್ಯದಾದ್ಯಂತ 240 ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು. ಹಣ ಪಾವತಿಸಬೇಕಾಗಿಲ್ಲ ಎಂದು ಹೇಳಿದರು. ಈ ಯೋಜನೆಯನ್ನು ಮೊದಲು ಕೆಎಸ್‌ಆರ್‌ಟಿಸಿ ನೌಕರರಿಗೆ ಪರಿಚಯಿಸಲಾಗುವುದು. ನಂತರ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಗೂ ವಿಸ್ತರಿಸಲಾಗುವುದು ಎಂದು ತಿಳಿಸಿದರು.

error: Content is protected !!
Scroll to Top