ದೇಶದೆಲ್ಲೆಡೆ ಹೊಸ ವರ್ಷದ ಸಂಭ್ರಮ: ಜನತೆಗೆ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಶುಭಾಶಯ

(ನ್ಯೂಸ್ ಕಡಬ) newskadaba.com .01 ನವದೆಹಲಿ: ದೇಶದಾದ್ಯಂತ ಹೊಸ ವರ್ಷದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಗಣ್ಯರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. 2025 ರ ವರ್ಷವು ಎಲ್ಲರಿಗೂ ಸಂತೋಷ, ಸಾಮರಸ್ಯ ಮತ್ತು ಸಮೃದ್ಧಿಯನ್ನು ತರಲಿ. ಈ ಸಂದರ್ಭದಲ್ಲಿ ಭಾರತ ಮತ್ತು ವಿಶ್ವಕ್ಕೆ ಉಜ್ವಲ, ಅಂತರ್ಗತ ಮತ್ತು ಸುಸ್ಥಿರ ಭವಿಷ್ಯವನ್ನು ಸೃಷ್ಟಿಸಲು ಒಟ್ಟಾಗಿ ಕೆಲಸ ಸಂಕಲ್ಪ ಮಾಡೋಣ ಎಂದು ಹೇಳಿದ್ದಾರೆ.

Also Read  ದಬ್ಬಾಳಿಕೆ ಮುಂದುವರೆದರೆ ಪೊಲೀಸ್ ಠಾಣೆಗೆ ಮುತ್ತಿಗೆ: ವಿಜಯೇಂದ್ರ ಎಚ್ಚರಿಕೆ

Nk Cake House

ಪ್ರಧಾನಿ ಮೋದಿಯವರು ಟ್ವೀಟ್ ಮಾಡಿ ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಈ ವರ್ಷ ಎಲ್ಲರಿಗೂ ಹೊಸ ಅವಕಾಶಗಳು, ಯಶಸ್ಸು ಮತ್ತು ಅಂತ್ಯವಿಲ್ಲದ ಸಂತೋಷವನ್ನು ತರಲಿ. ಪ್ರತಿಯೊಬ್ಬರೂ ಆರೋಗ್ಯ ಮತ್ತು ಸಮೃದ್ಧಿ ಲಭಿಸಲಿ ಎಂದು ತಿಳಿಸಿದ್ದಾರೆ. 2025ರ ವರ್ಷ ನಿಮ್ಮ ಪಾಲಿಗೆ ಭರವಸೆ, ಸಂತೋಷ ಮತ್ತು ಬಹಳಷ್ಟು ಯಶಸ್ಸಿನಿಂದ ಕೂಡಿರಲಿ. ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸಿಗುವಂತಾಗಲಿ ಎಂದು ಆಶಿಸುತ್ತೇನೆ’ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಟ್ವೀಟ್ ಮಾಡಿ, ನಿಮ್ಮೆಲ್ಲರಿಗೂ ಹೊಸ ವರ್ಷದ ಶುಭಾಶಯಗಳು, ಈ ವರ್ಷವು ನಿಮ್ಮ ಜೀವನದಲ್ಲಿ ಹೊಸ ಉತ್ಸಾಹ, ಹೊಸ ಸಂತೋಷ ತರಲಿ ಎಂದು ಆಶಿಸುತ್ತೇನೆ’ ಎಂದು ಹೇಳಿದ್ದಾರೆ.

error: Content is protected !!
Scroll to Top