(ನ್ಯೂಸ್ ಕಡಬ) newskadaba.com ಜ.01: ಹೊಸದಿಲ್ಲಿ: ಕೇವಲ ಮತದಾರರ ಗುರುತಿನ ಚೀಟಿಯು ಮತದಾನದ ಹಕ್ಕನ್ನು ಖಾತರಿಪಡಿಸುವುದಿಲ್ಲ ಎಂದು ದಿಲ್ಲಿಯ ಮುಖ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ.
ನವೀಕರಿಸಿದ ಮತದಾರರ ಪಟ್ಟಿಯಲ್ಲಿ ಒಬ್ಬ ವ್ಯಕ್ತಿಯ ಹೆಸರನ್ನು ಪಟ್ಟಿ ಮಾಡದ ಹೊರತು ಕೇವಲ ಗುರುತಿನ ಚೀಟಿಯನ್ನು ಹೊಂದಿರುವುದರಿಂದ ಮತದಾನದ ಹಕ್ಕನ್ನು ಖಾತರಿಪಡಿಸುವುದಿಲ್ಲ ಎಂದು ದಿಲ್ಲಿಯ ಮುಖ್ಯ ಚುನಾವಣಾ ಅಧಿಕಾರಿ ಸ್ಪಷ್ಟಪಡಿಸಿದ್ದಾರೆ.
ಜನವರಿ 1ರಂದು ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆಯನ್ನು ನಡೆಸಲಾಗುತ್ತಿದ್ದು, ಭಾರತೀಯ ಚುನಾವಣಾ ಆಯೋಗದ ಸೂಚನೆಗಳ ಪ್ರಕಾರ ಈ ಪ್ರಕ್ರಿಯೆಯನ್ನು ನಡೆಸಲಾಗುತ್ತಿದೆ. ಮತದಾರರ ನವೀಕೃತ ಪಟ್ಟಿಯಲ್ಲಿ ಎಲ್ಲಾ ಅರ್ಹ ಮತದಾರರ ಹೆಸರುಗಳು ಇರಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.