ಮಾ.31: ಸವಣೂರಲ್ಲಿ ಎಸ್‍ಪಿ ರವಿಕಾಂತೇ ಗೌಡ ಉಪಸ್ಥಿತಿಯಲ್ಲಿ ಪೊಲೀಸ್ ಬೀಟ್ ಸಭೆ

(ನ್ಯೂಸ್ ಕಡಬ) newskadaba.com ಸವಣೂರು, ಮಾ.27. ಬೆಳಂದೂರು ಹಾಗೂ ಸವಣೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೊಲೀಸ್ ಬೀಟ್ ಸಭೆಯು ಮಾ.31ರ ಶನಿವಾರ ಸಂಜೆ 3 ಗಂಟೆಗೆ ಸವಣೂರಿನ ಪ್ರಿಯಕಾರಿಣಿ ಸಭಾಭವನದಲ್ಲಿ ನಡೆಯಲಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಆರ್. ರವಿಕಾಂತೇ ಗೌಡ ಜನಸಂಪರ್ಕ ಸಭೆಯಲ್ಲಿ ಭಾಗವಹಿಸುತ್ತಿದ್ದು, ಪೊಲೀಸ್ ಇಲಾಖೆಗೆ ಸಂಬಂಧಪಟ್ಟಂತಹ ಸಮಸ್ಯೆ, ದೂರುಗಳಿದ್ದಲ್ಲಿ ಸಾರ್ವಜನಿಕರು ಸಭೆಯಲ್ಲಿ ತಿಳಿಸಬಹುದು ಎಂದು ಬೆಳ್ಳಾರೆ ಪೊಲೀಸ್ ಠಾಣೆ ಪ್ರಕಟಣೆಯಲ್ಲಿ ತಿಳಿಸಿದೆ.

error: Content is protected !!
Scroll to Top