ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಜ.31ರವರೆಗೆ ವಿಸ್ತರಣೆ

(ನ್ಯೂಸ್ ಕಡಬ) newskadaba.com ಜ.02 ಬೆಂಗಳೂರು: ಪಡಿತರ ಚೀಟಿ ತಿದ್ದುಪಡಿಗೆ  ಈ ಹಿಂದೆ 2024ನೇ ಸಾಲಿನ ಡಿಸೆಂಬರ್‌ 31ರ ವರೆಗೆ ನೀಡಲಾಗಿದ್ದ ಅವಕಾಶವನ್ನು ಆಹಾರ ಇಲಾಖೆ ಜನವರಿ 31 ರವರೆಗೆ ವಿಸ್ತರಿಸಿದೆ.

ರೇಷನ್‌ ಕಾರ್ಡ್‌ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಈ ಅವಕಾಶ ನೀಡಲಾಗಿದ್ದು, ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ, ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ. ಬೆಳಗ್ಗೆ 10ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ. ತಿದ್ದುಪಡಿ ಅವಧಿಯು 2025ನೇ ಸಾಲಿನ ಜನವರಿ ತಿಂಗಳ 31ರ ವರೆಗೆ ಇರಲಿದೆ.

Also Read  ಕೃಷಿ ಉತ್ಪನ್ನ ಮಾರುಕಟ್ಟೆ - ಅಭಿನಂದನಾ ಕಾರ್ಯಕ್ರಮ

Nk Cake House

ಸೈಬರ್ ಸೆಂಟರ್‌ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಇರುವವರು ಕೂಡ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರಿಗೆ ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗುವುದು. http://ahara.kar.nic.in ವೆಬ್‌ಸೈಟ್‌ ಗಮನಿಸಬಹುದಾಗಿದೆ.

error: Content is protected !!
Scroll to Top