ನಮ್ಮ ಮೆಟ್ರೊ ‘ಹಳದಿ’ ಮಾರ್ಗ: ಕಾರ್ಯಾಚರಣೆ ವಿಳಂಬಕ್ಕೆ ಕಾರಣ ತಿಳಿಸಿದ ಸಂಸದ ತೇಜಸ್ವಿ ಸೂರ್ಯ

(ನ್ಯೂಸ್ ಕಡಬ) newskadaba.com ಜ.02 ಬೆಂಗಳೂರು: ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಮತ್ತಷ್ಟು ವಿಳಂಬವಾಗುತ್ತಿತ್ತು, ಕಾರ್ಯಾಚರಣೆ ವಿಳಂಬಕ್ಕೆ ಸಂಸದ ತೇಜಸ್ವಿ ಸೂರ್ಯ ಅವರು ಕಾರಣ ತಿಳಿಸಿದ್ದಾರೆ.

Nk Cake House

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ನಿಮಗೆಲ್ಲರಿಗೂ ತಿಳಿದಿರುವಂತೆ, ನಮ್ಮ ಮೆಟ್ರೋ ಹಳದಿ ಮಾರ್ಗದ ಕಾರ್ಯಾಚರಣೆಯ ಪ್ರಾರಂಭವು ಬಿಎಂಆರ್’ಸಿಎಲ್ ನೀಡಿದ ಎಲ್ಲಾ ಗಡುವನ್ನು ಪೂರೈಸುವಲ್ಲಿ ವಿಫಲವಾಗಿದೆ. ಇದು ನಮ್ಮೆಲ್ಲರನ್ನು ನಿರಾಶೆಗೊಳಿಸಿದೆ. ರೈಲುಗಳ ಅಲಭ್ಯತೆಯೇ ಕಾರ್ಯಾಚರಣೆ ವಿಳಂಬಕ್ಕೆ ಪ್ರಮುಖ ಕಾರಣ ಎಂದು ಹೇಳಿದ್ದಾರೆ.

ಮುಂದುವರೆದು, ಕಳೆದ ಕೆಲವು ತಿಂಗಳುಗಳಿಂದ, ಉತ್ಪಾದನೆಯನ್ನು ತ್ವರಿತಗೊಳಿಸಲು ನಾನು ರೈಲು ತಯಾರಕರಾದ ತೀತಗಢ್ ರೈಲ್ ಸಿಸ್ಟಮ್ಸ್‌ನೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ. ಎಂಜಿನಿಯರ್‌ಗಳಿಗೆ ವೀಸಾ ಸೇರಿದಂತೆ ಹಲವು ರಸ್ತೆ ತಡೆಗಳನ್ನು ಪರಿಹರಿಸಲಾಗಿದೆ. ಈಗ ಜನವರಿ 6 ರಂದು ಬೆಂಗಳೂರಿಗೆ ಕಳುಹಿಸಲು ಮೊದಲ ರೈಲು ಸಿದ್ಧವಾಗಿದೆ. ಜನವರಿ ಅಂತ್ಯ ಅಥವಾ ಫೆಬ್ರವರಿ ಮೊದಲ ವಾರದಲ್ಲಿ ಎರಡನೇ ರೈಲನ್ನು ಮತ್ತು ಏಪ್ರಿಲ್‌ನಲ್ಲಿ ಮೂರನೇ ರೈಲನ್ನು ತಲುಪಿಸುವುದಾಗಿ ತೀತಗಢ್‌ ತಿಳಿಸಿದೆ. ಅದಾದ ಬಳಿಕ, ತಿಂಗಳಿಗೆ 1 ರೈಲನ್ನು ಸರಬರಾಜು ಮಾಡುವುದಾಗಿ ಹೇಳಿದೆ. ಸೆಪ್ಟೆಂಬರ್ ವೇಳೆಗೆ ತಿಂಗಳಿಗೆ 2 ರೈಲುಗಳನ್ನು ಬೆಂಗಳೂರಿಗೆ ಕಳುಹಿಸುವ ಪ್ರಯತ್ನ ಸಹ ಆಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Also Read  ಎಡಮಂಗಲ: ವಸತಿ ಮಂಜೂರಾತಿಯಲ್ಲಿ ಅಕ್ರಮ - ವಿಎ, ಪಿಡಿಓ ವಿರುದ್ಧ ಪ್ರಕರಣ ದಾಖಲು

error: Content is protected !!
Scroll to Top