(ನ್ಯೂಸ್ ಕಡಬ) newskadaba.com ಜ.03 ಬೆಂಗಳೂರು: ಶಕ್ತಿ ಯೋಜನೆಯನ್ನು ಸರಳೀಕರಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಶೀಘ್ರದಲ್ಲೇ ಫಲಾನುಭವಿಗಳಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಿದೆ.
ಯೋಜನೆಯು ರಾಜ್ಯದ ಮಹಿಳೆಯರಿಗೆ ಮಾತ್ರ ಅನ್ವಯಿಸುವುದರಿಂದ, ಮಹಿಳೆಯರು ತಮ್ಮ ಸ್ಥಳೀಯ ವಿಳಾಸಗಳನ್ನು ಹೊಂದಿರುವ ಗುರುತಿನ ಚೀಟಿಯನ್ನು ಹಾಜರುಪಡಿಸಬೇಕಾಗುತ್ತದೆ. ಪರಿಶೀಲನೆಯ ನಂತರ, ಕಂಡಕ್ಟರ್‌ಗಳು ಶೂನ್ಯ ಟಿಕೆಟ್‌ಗಳನ್ನು ನೀಡುತ್ತಿದ್ದಾರೆ. ಈ ಪರಿಶೀಲನೆಗೆ ಸಾಕಷ್ಟು ಸಮಯ ಬೇಕಾಗುತ್ತಿದೆ ಎಂದು ಹಲವು ದೂರುಗಳು ಬಂದಿದ್ದವು.
ಅಲ್ಲದೆ, ಮಹಿಳಾ ಪ್ರಯಾಣಿಕರು ಮತ್ತು ಕಂಡಕ್ಟರ್‌ಗಳ ನಡುವೆ ಘರ್ಷಣೆಗಳೂ ಕೂಡ ನಡೆಯುತ್ತಿವ್ದು, ಕರ್ನಾಟಕದ ನಿವಾಸಿಗಳಲ್ಲದ ಮಹಿಳೆಯರೂ ಕೂಡ ಉಚಿತ ಯೋಜನೆ ಪಡೆಯಲು ಪ್ರಯತ್ನ ನಡೆಸಿದ ನಿದರ್ಶನಗಳು ಕಂಡು ಬಂದಿವೆ.ಬಸ್ ಮುಂದಿನ ಹಂತಕ್ಕೆ ಪ್ರವೇಶಿಸುವ ಮೊದಲು ಕಂಡಕ್ಟರ್‌ಗಳು ಎಲ್ಲಾ ಪ್ರಯಾಣಿಕರಿಗೆ ಟಿಕೆಟ್‌ಗಳನ್ನು ನೀಡಬೇಕಾಗಿದೆ. ಪೀಕ್ ಅವರ್‌ಗಳಲ್ಲಿ ದಾಖಲೆಗಳ ಪರಿಶೀಲಿಸಿ ಟಿಕೆಟ್ ನೀಡುವುದು ನಿರ್ವಾಹಕರಿಗೆ ಕಷ್ಟವಾಗುತ್ತಿದೆ ಹಾಗೂ ಇದಕ್ಕಾಗಿ ವಾಹವಗಳನ್ನು ಕೆಲವು ನಿಮಿಷಗಳ ಕಾಲ ನಿಲ್ಲಿಸುವ ಅನಿವಾರ್ಯತೆ ಎದುರಾಗುತ್ತಿದೆ. ಸ್ಮಾರ್ಟ್ ಕಾರ್ಡ್ ಗಳನ್ನು ವಿತರಿಸಿದರೆ ಇದು ನಿರ್ವಾಹಕರ ಕೆಲಸವನ್ನು ಸುಲಭವಾಗಿಸುತ್ತದೆ. ಅಲ್ಲದೆ, ಒಟ್ಟು ಫಲಾನುಭವಿಗಳ ಬಗ್ಗೆ ಸ್ಪಷ್ಟ ಚಿತ್ರಣ ಕೂಡ ಸಿಗಲಿದೆ ಎಂದು ಮೂಲಗಳು ತಿಳಿಸಿವೆ.