ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದ್ದು, ಸರ್ಕಾರ ಶ್ವೇತಪತ್ರ ಹೊರಡಿಸಲಿ: ವಿಶ್ವನಾಥ್ ಆಗ್ರಹ

(ನ್ಯೂಸ್ ಕಡಬ) newskadaba.com ಜ.03 ಮೈಸೂರು: ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದ್ದು, ಸರ್ಕಾರ ಶ್ವೇತಪತ್ರ ಹೊರಡಿಸಲಿ ಎಂದು ಬಿಜೆಪಿ ಎಂಎಲ್ಸಿ ಎ ಹೆಚ್ ವಿಶ್ವನಾಥ್ ಅವರು ಆಗ್ರಹಿಸಿದ್ದಾರೆ,

Nk Cake House

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 5 ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದ ಹಣಕಾಸಿನ ಸ್ಥಿತಿ ಅಧೋಗತಿಗೆ ತಲುಪಿದೆ. ರಾಜ್ಯದ ಹಣಕಾಸಿನ ಪರಿಸ್ಥಿತಿ ಮುಗ್ಗುರಿಸಿಬಿದ್ದಿದೆ. ವಿರೋಧಪಕ್ಷದ ಸ್ಥಾದಲ್ಲಿರುವ ಬಿಜೆಪಿ ನಾಯಕರು ಈ ಬಗ್ಗೆ ತುಟಿ ಬಿಚ್ಚುತ್ತಿಲ್ಲ. ಆರ್ಥಿಕ ತಜ್ಞ ಮೋಹನ್ ದಾಸ್ ಪೈ ಕೂಡ ಆರ್ಥಿಕ ಪರಿಸ್ಥಿತಿ ಚಿಂತಾಜನಕವಾಗಿರುವ ಬಗ್ಗೆ ಆತಂಕದಿಂದ ಮಾತನಾಡಿದ್ದಾರೆ. ಆರ್ಥಿಕ ಬಿಕ್ಕಟ್ಟು ಸರ್ಕಾರದ ಕುತ್ತಿಗೆ ಹಿಸುಕುತ್ತಿದೆ ಎಂದು ಹೇಳಿದರು.

ಸಾರಿಗೆ ಇಲಾಖೆಯ ನಾಲ್ಕು ನಿಗಮಗಳಿಗೆ2 ಸಾವಿರ ಕೋಟಿ ರೂ. ಸಾಲ ಪಡೆಯಲು ರಾಜ್ಯಸರ್ಕಾರ ಒಪ್ಪಿಗೆ ನೀಡಿದೆ. ಸಾಲ ಮರುಪಾವತಿಸಲು ಪರದಾಡುತ್ತಿರುವ ಕಾರಣ ಸಾಲ ಮಂಜೂರಾಗಲಿದೆಯೇ ಅಥವಾ ಇಲ್ಲವೇ ನೋಡಬೇಕು. ಶೇ.18ರಷ್ಟು ಬಡ್ಡಿ ಕಟ್ಟಬೇಕಿದೆ. ಸಿದ್ದರಾಮಯ್ಯ ಅವರ ಕೊಡುಗೆಗಳಿಂದ ರಾಜ್ಯ ಅಧೋಗತಿಗೆ ಬಂದಿದೆ’ ಎಂದು ವಾಗ್ದಾಳಿ ನಡೆಸಿದರು.

Also Read  ಕಟೀಲು ರಸ್ತೆ ಅಭಿವೃದ್ಧಿ- ಸಂಚಾರ ಮಾರ್ಪಾಡು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಳ್ಳು ಭಾಷಣಗಳ ರಾಜ, ಖಾತರಿ ಯೋಜನೆಗಳನ್ನು ಜಾರಿಗೆ ತಂದ ನಂತರ ಹಣಕಾಸು ನಿರ್ವಹಣೆಯಲ್ಲಿ ವಿಫಲರಾಗಿದ್ದಾರೆ. ಸಿದ್ದರಾಮಯ್ಯ ಅವರು 16ನೇ ಬಜೆಟ್ ಮಂಡನೆಗೆ ಸಿದ್ಧತೆ ನಡೆಸುತ್ತಿದ್ದಾರೆ. ಆದರೆ, ಕಳೆದ ವರ್ಷ ಏನು ಬದಲಾವಣೆ ಮಾಡಿದ್ದಾರೆ, ಏನಾದರೂ ಸುಧಾರಣೆ ತಂದಿದ್ದಾರೆಯೇ? ಹೊಸತನದಿಂದ ಆದಾಯ ತಂದಿದ್ದಾರೆಯೇ? ಹಣಕಾಸು ಸ್ಥಿತಿ ಬಗ್ಗೆ ಜನರ ಮುಂದೆ ಸತ್ಯಹೇಳಬೇಕೇ ಹೊರತು ಮುಚ್ಚಿಟ್ಟುಕೊಳ್ಳಬಾರದು ಎಂದು ತಿಳಿಸಿದರು.

Also Read  ಮನೆಯಲ್ಲಿ ಶುಭ ಕಾರ್ಯ ನಡೆಯುತ್ತಿಲ್ಲವೆ ? ನಿಮ್ಮ ಎಲ್ಲ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಪಡೆದುಕೊಳ್ಳಿ

error: Content is protected !!
Scroll to Top