‘ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್ ಸ್ಥಿತಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ’- ಅಶೋಕ್

(ನ್ಯೂಸ್ ಕಡಬ) newskadaba.com ಜ.03  ‌: ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್ ಸ್ಥಿತಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ. ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆ ಎಂಬ ತಮ್ಮ ಮಾತನ್ನು ಕಾರ್ಯಗತ ಮಾಡುವ ಸಮಯ ಬಂದಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.

ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಬಣದ ಏಳು ಮಂದಿ ಸಚಿವರು ಮತ್ತು 35 ಮಂದಿ ಶಾಸಕರು ಗುರುವಾರ ರಾತ್ರಿ ಔತಣಕೂಟ ಮಾಡಿರುವುದನ್ನು ಉಲ್ಲೇಖಿಸಿ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಅತ್ತ ಡಿಸಿಎಂ ಡಿಕೆ ಶಿವಕುಮಾರ್ ವಿದೇಶ ಪ್ರವಾಸಕ್ಕೆ ಹೋಗುವುದನ್ನೇ ಕಾಯುತ್ತಿದ್ದ ಸಿಎಂ ಸಿದ್ದರಾಮಯ್ಯ ಬಣ, ಇತ್ತ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದಲ್ಲಿ 35 ಶಾಸಕರ ಡಿನ್ನರ್ ಮೀಟಿಂಗ್ ನಡೆಸಿ ಶಕ್ತಿ ಪ್ರದರ್ಶನ ಮಾಡಿದೆ. ಸ್ವಾಮಿ ಡಿಕೆ ಶಿವಕುಮಾರ್ ಅವರೇ, ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆ ಎಂದು ಸದನದಲ್ಲಿ ತಾವು ಅಬ್ಬರಿಸದ್ದನ್ನು ಕಾರ್ಯಗತ ಮಾಡುವ ಸಮಯ ಬಂದಿದೆ ಎಂದು ಬರೆದುಕೊಂಡಿಕೊಂಡಿದ್ದಾರೆ.

Also Read  ಫಾಝಿಲ್ ಕೊಲೆ ಆರೋಪಿಗಳು 14 ದಿನ ಪೊಲೀಸ್ ಕಸ್ಟಡಿಗೆ

Nk Cake House

ತಮ್ಮ ಅನುಪಸ್ಥಿತಿಯಲ್ಲಿ ಸಂಪುಟ ಸಭೆ ನಡೆಯುತ್ತದೆ. ಬಸ್ ಟಿಕೆಟ್ ದರ ಶೇ 15 ರಷ್ಟು ಹೆಚ್ಚಿಸುವಂತಹ ಪ್ರಮುಖ ನಿರ್ಧಾರ ಆಗುತ್ತದೆ. ಒಬ್ಬ ಉಪಮುಖ್ಯಮಂತ್ರಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷರ ಅನುಪಸ್ಥಿತಿಯಲ್ಲಿ ಇಂತಹ ನಿರ್ಧಾರಗಳು ಆಗುತ್ತೆ ಅಂದರೆ ಏನರ್ಥ? ಕಾಂಗ್ರೆಸ್ ಪಕ್ಷದಲ್ಲಿ ತಾವು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆಯೇ ಅಥವಾ ತಮ್ಮ ಅಬ್ಬರ ಏನಿದ್ದರೂ ಮಾಧ್ಯಮಗಳ ಮುಂದೆ ಮಾತ್ರವೇ? ಹೀಗೆ ಮುಂದುವರೆದರೆ ತಮ್ಮ ಕನಸು ಕನಸಾಗಿಯೇ ಉಳಿಯುವುದು ಮಾತ್ರ ಗ್ಯಾರೆಂಟಿ ಎಂದು ಪೋಸ್ಟ್ ನಲ್ಲಿ ಉಲ್ಲೇಖಿಸಿದ್ದಾರೆ.

Also Read  ಉಡುಪಿ: ಕಳೆದ ಜು. 03ರ ಮಳೆಗೆ ಕೊಚ್ಚಿಹೋಗಿದ್ದ ವ್ಯಕ್ತಿಯ ಅಸ್ಥಿಪಂಜರ ಪತ್ತೆ..!

error: Content is protected !!
Scroll to Top