(ನ್ಯೂಸ್ ಕಡಬ) newskadaba.com ಜ.03 ಬೆಂಗಳೂರು: ಸಮಗ್ರ ಔಷಧ ಸೇವೆ ಒದಗಿಸುತ್ತಿರುವ ನಿಮ್ಹಾನ್ಸ್ ಸಂಸ್ಥೆ ಮಾದರಿಯಾಗಿದೆ. ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮದ ಪ್ರಚಾರದಲ್ಲಿ ಯೋಗ ಮತ್ತು ಆಯುರ್ವೇದದ ಅಪ್ಲಿಕೇಶನ್ ಅನುಕರಣೆ ಯೋಗ್ಯವಾಗಿದೆ ಎಂದು ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಹೇಳಿದ್ದಾರೆ.
ನಿಮ್ಹಾನ್ಸ್ (ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋಸೈನ್ಸ್) ನ ಇಂಟಿಗ್ರೇಟಿವ್ ಮೆಡಿಸಿನ್ ಸೇವೆಗಳು ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮದ ಪ್ರಚಾರದಲ್ಲಿ ಯೋಗ ಮತ್ತು ಆಯುರ್ವೇದದ ಅನ್ವಯಗಳನ್ನು ಪರೀಕ್ಷಿಸಲು ಮತ್ತು ಮನೋವೈದ್ಯಕೀಯ ಮತ್ತು ನರವೈಜ್ಞಾನಿಕ ಅಸ್ವಸ್ಥತೆಗಳ ಚಿಕಿತ್ಸೆಯಲ್ಲಿ ಎಲ್ಲರಿಗೂ ಮಾದರಿಯಾಗಿದೆ ಎಂದರು.
ಬೆಂಗಳೂರಿನಲ್ಲಿರುವ ನಿಮ್ಹಾನ್ಸ್ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅದಕ್ಕೂ ಮುನ್ನ ಸೈಕಿಯಾಟ್ರಿ ಸ್ಪೆಷಾಲಿಟಿ ಬ್ಲಾಕ್, ಸೆಂಟ್ರಲ್ ಲ್ಯಾಬೋರೇಟರಿ ಕಾಂಪ್ಲೆಕ್ಸ್ ಮತ್ತು ಭೀಮಾ ಹಾಸ್ಟೆಲ್ ನ್ನು ಉದ್ಘಾಟಿಸಿದರು. ಅತ್ಯಾಧುನಿಕ ರೋಗನಿರ್ಣಯ ಸೌಲಭ್ಯಗಳನ್ನು ಸುಧಾರಿತ 3ಟಿ ಎಂಆರ್ ಐ ಸ್ಕ್ಯಾನರ್ ಮತ್ತು ಡಿಎಸ್ ಎ ವ್ಯವಸ್ಥೆಯನ್ನು ರಾಷ್ಟ್ರಕ್ಕೆ ಸಮರ್ಪಿಸಿದರು.